LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

200 ಹಣಕ್ಕಾಗಿ ಮಂಗಳಮುಖಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಅರೆಸ್ಟ್ 

Advertisement

ಬೆಂಗಳೂರು: ₹200 ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಂಗಳಮುಖಿಯೊಬ್ಬರನ್ನು ಚಾಕುವಿನಿಂದ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ದೇವಿ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಗೌತಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹಣದ ವಿಚಾರಕ್ಕೆ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ₹200 ನೀಡಲು ನಿರಾಕರಿಸಿದ್ದಕ್ಕೆ ಆರೋಪಿ ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯು ಚಾಕುವಿನಿಂದ ದೇವಿ ಅವರ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಪೊಲೀಸರ ಪ್ರಕಾರ, ರಾಮಮೂರ್ತಿನಗರ ನಿವಾಸಿಯಾಗಿರುವ ಗೌತಮ್‌ ದರೋಡೆ ಮಾಡುವ ಉದ್ದೇಶದಿಂದ ಬಂದಿದ್ದ ಎನ್ನಲಾಗಿದೆ. ದೇವಿ ₹200 ಹಣ ನೀಡಲು ನಿರಾಕರಿಸಿದ್ದರಿಂದ ಆರೋಪಿ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಕ್ಕಾಯ್ ಟೆಸ್ಟ್ : ಬಾಂಗ್ಲಾದೇಶ ತಿರುಗೇಟು ಭಾರತದ ಯುವ ಬ್ಯಾಡ್ಮಿಟನ್ ಜೋಡಿಗೆ ಕಂಚಿನ ಪದಕ ಆಪ್ತರಿಗೆ ಮಂತ್ರಿಗಿರಿ ತಪ್ಪಿದ್ದಕ್ಕೆ ಅಸಮಾಧಾನ : ಕೆ.ಸಿ. ವೇಣುಗೋಪಾಲ್ ಬಳಿ ಸಿದ್ದು ಬೇಸರರಾಷ್ಟ್ರೀಯ ಅಧ್ಯಕ್ಷ ಅನ್ನೋಕೆ ನಾಚಿಕೆಯಾದರೆ ದಲಿತ ಅನ್ನಿ: ಖರ್ಗೆ ತೀವ್ರ ವಾಗ್ದಾಳಿ 200 ಹಣಕ್ಕಾಗಿ ಮಂಗಳಮುಖಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಅರೆಸ್ಟ್ ನೊಂದವರ ಜೊತೆ ದುರ್ವರ್ತನೆ ತೋರಿದ ಪಿಎಸ್‌ಐ ವರ್ಗಾವಣೆ ; ಠಾಣೆಯಲ್ಲೇ ಪಟಾಕಿ ಸಿಡಿಸಿ ಸಂಭ್ರಮಿಸಿದ ಜನರುಹಂಪಿ ಪ್ರವಾಸಕ್ಕೆ ಬಂದಿದ್ದ ತಾಯಿ ಹಾಗೂ ಮಗಳು ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: ಮೂವರು ಎಂಜಿನಿಯರ್ ಗಳು ಸಾವು, ಓರ್ವನ ಸ್ಥಿತಿ ಗಂಭೀರಸ್ಪೀನ್ನರ್ ಸಾಯಿರಾಜ್ ಜೇಯನ್ ಆಡಿಸುವ ಕುರಿತು ನಾಳೆಯೇ ನಿರ್ಧಾರ : ಬಹುತಲೆ ಭಾರತ- ಶ್ರೀಲಂಕ ಎರಡನೇ ಟೆಸ್ಟ್ ನಾಳೆಯಿಂದ