Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಗೌರವಗಳೊಂದಿಗೆ ನಡೆದ ಮನೋಜ ಕುಮಾರ್ ಅಂತ್ಯಕ್ರಿಯೆ

Advertisement
ಶುಕ್ರವಾರ ನಿಧನರಾದ  ಹೆಸರಾಂತ ನಟ-ನಿರ್ದೇಶಕ ಮನೋಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು (ಏಪ್ರಿಲ್ 5) ಮುಂಬೈನ ಜುಹುನಲ್ಲಿ ನಡೆಯಿತು. ಹಲವು ಬಾಲಿವುಡ್ ತಾರೆಯರು ಹಾಜರಿದ್ದರು.

ತಾರೆಯ ಪಾರ್ಥೀವ ಶರೀರವನ್ನು ಅವರ ಮುಂಬೈ ನಿವಾಸಕ್ಕೆ ತರಲಾಯಿತು. ಕುಟುಂಬ ಸದಸ್ಯರು ಮತ್ತು ಆಪ್ತರು ಗೌರವ ಸಲ್ಲಿಸಿದರು. ಅಂತಿಮವಾಗಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಚಿತ್ರರಂಗ, ವಿವಿಧ ಕ್ಷೇತ್ರಗಳ ಗಣ್ಯರೂ ಸೇರಿದಂತೆ ಅಭಿಮಾನಿಗಳು ಕುಮಾರ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಪ್ರೊಟೋಕಾಲ್​​ ಪ್ರಕಾರ, ಅವರ ಪಾರ್ಥೀವ ಶರೀರವನ್ನು ಭಾರತೀಯ ರಾಷ್ಟ್ರಧ್ವಜದಲ್ಲಿ ಸುತ್ತಿಡಲಾಗಿತ್ತು. ಅಂತ್ಯಕ್ರಿಯೆ ವೇಳೆ ಕುಮಾರ್ ಅವರ ಪತ್ನಿ ಶಶಿ ಗೋಸ್ವಾಮಿ ಕಣ್ಣೀರಲ್ಲಿ ಮುಳುಗಿದ್ದು ಕಂಡುಬಂತು.

ದೇಶಭಕ್ತಿ ಪ್ರಧಾನ ಚಿತ್ರಗಳಿಂದ ಜನಮನ್ನಣೆ: ಮನೋಜ್ ಕುಮಾರ್ ತಮ್ಮ ದೇಶಭಕ್ತಿ ಪ್ರಧಾನ ಚಿತ್ರಗಳಿಂದ ಹೆಸರುವಾಸಿಯಾದವರು. ಅವರ ಸಿನಿಮಾಗಳು ಅವರನ್ನು ಹಿಂದಿ ಚಿತ್ರರಂಗದಲ್ಲಿ ಪ್ರೀತಿಯ ಮತ್ತು ಪ್ರಮುಖ ವ್ಯಕ್ತಿಯನ್ನಾಗಿ ಮಾಡಿದವು. ಶಾಹಿದ್ (1965), ಉಪ್ಕಾರ್ (1967), ಪೂರಬ್ ಔರ್ ಪಶ್ಚಿಮ್ (1970) ಮತ್ತು ಕ್ರಾಂತಿ (1981)ಯಂತಹ ಚಿತ್ರಗಳಲ್ಲಿನ ಪಾತ್ರಗಳ ಮೂಲಕ ಭಾರತದಲ್ಲಿ ಮನೆಮಾತಾದರು. ರಾಷ್ಟ್ರೀಯ ಹೆಮ್ಮೆಯನ್ನು ಹೆಚ್ಚಿಸುವಂತಹ ವಿಷಯಗಳಿಂದ ಅವರ ಸಿನಿಮಾಗಳು ಬಹಳ ಜನಪ್ರಿಯವಾಗಿದ್ದವು. ಈ ಮೂಲಕ "ಭರತ್ ಕುಮಾರ್" ಎಂಬ ಬಿರುದನ್ನು ಸಂಪಾದಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್