LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭೂಗಳ್ಳರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಕಛೇರಿಗೆ ಪಾದಯಾತ್ರೆ.

Advertisement
ಸಿರುಗುಪ್ಪ : ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿನ ಶ್ರಮಿಕ ಭವನದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಸಮಿತಿಯ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಇದೇ ತಿಂಗಳ 28,29 ರಂದು ತಾಲೂಕು ಕೇಂದ್ರದಿಂದ ಜಿಲ್ಲಾ ಕಛೇರಿವರೆಗೂ ಪಾದಯಾತ್ರೆ ಮಾಡುವ ಮೂಲಕ ಭೂಗಳ್ಳತನದಲ್ಲಿ ಬಾಗಿಯಾಗಿರುವ ಅಧಿಕಾರಿಯ ವಿರುದ್ದ ಪ್ರತಿಭಟನೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾಧ್ಯಕ್ಷ ವಿ.ಮಾರುತಿ ಅವರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಂ.64 ಹಳೇಕೋಟೆ ಮತ್ತು ಸಿರಿಗೇರಿ ಗ್ರಾಮಗಳಲ್ಲಿ ನೂರಾರು ಎಕರೆ ಜಮೀನುಗಳನ್ನು ತಮ್ಮ ಸಂಬಂಧಿಕರಿಗೆ ಅಕ್ರಮವಾಗಿ ನೋಂಧಣಿ ಮಾಡಿಸಿರುವ ಅಧಿಕಾರಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಶಿವಶಂಕರ ಅವರು ಮಾತನಾಡಿ ತಾಲೂಕಿನ ನಂ.64 ಹಳೇಕೋಟೆ ಗ್ರಾಮದಲ್ಲಿನ ಮದ್ರಾಸ್ ಕುಟುಂಬದವರ ಹೆಸರಿನಲ್ಲಿ ಇಲ್ಲಿನ ಸಬ್ ರಿಜಿಸ್ಟ್ರಾರ್ ಯಲ್ಲಾರೆಡ್ಡೆಪ್ಪ ಬಳ್ಳಾರಿ ಹೃದಯಾಲದಲ್ಲಿ ಸಾವಿನಂಚಿನಲ್ಲಿರುವ ವೃದ್ದ ವ್ಯಕ್ತಿಯನ್ನು ಕರೆತಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಕಾನೂನು ಬಾಹಿರವಾಗಿ ತಮ್ಮದೇ ಸಂಬಂಧಿಕರ ಹೆಸರಿನಲ್ಲಿ ಭೂಮಿಯನ್ನು ನೋಂಧಣಿ ಮಾಡಿಸಿರುತ್ತಾರೆಂದು ಆರೋಪಿಸಿದರು.

ತಾಲೂಕಿನಲ್ಲಿ ಸರ್ಕಾರಕ್ಕೆ ಬರಬೇಕಾದ ಒಟ್ಟು 130ಕ್ಕೂ ಅಧಿಕ ಎಕರೆ ಜಮೀನನ್ನು ಅಕ್ರಮವಾಗಿ ನೋಂಧಣಿ ಮಾಡಿಸಿಕೊಂಡು ಭೂ ಒಡೆತನ ಯೋಜನೆಯಡಿ ಮಾರಾಟ ಮಾಡಿ 60ಕೋಟಿ ಯಷ್ಟು ಮೊತ್ತವನ್ನು ಲಪಟಾಯಿಸುತ್ತಿರುವ ಸಬ್ ರಿಜಿಸ್ಟ್ರಾರ್ ಯಲ್ಲಾರೆಡ್ಡೆಪ್ಪ ಹಾಗೂ ಇನ್ನಿತರ ಭೂಗಳ್ಳರಾದ ರಾಮನಗೌಡ, ಮಹಾಂತೇಶ್, ಶಿವುಕುಮಾರ್ ಅವರನ್ನು ತಕ್ಷಣವೇ ಬಂಧಿಸಿ ಕ್ರಮಿನಲ್ ಮೊಕದ್ದಮೆ ದಾಖಲಿಸಬೇಕು.

ನಂ.64 ಹಳೇಕೋಟೆ ಗ್ರಾಮದಲ್ಲಿ ಸುಮಾರು 70, 80 ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿರುತ್ತಾರೆ. ಅಕ್ರಮವಾಗಿ ಕಬಳಿಸಿರುವ ಜಮೀನಿನಲ್ಲಿ, ಮಾಜಿ ಸೈನಿಕರಿಗೆ ಎಸ್.ಸಿ ಮತ್ತು ಎಸ್.ಟಿ ರೈತರಿಗೆ, ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿದರು.

ಇಲ್ಲಿನ ಅಕ್ರಮ ಭೂಮಾಫಿಯಾ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ, ಕಂದಾಯ ಇಲಾಖೆಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇವರೆಲ್ಲಾ ಭೂಗಳ್ಳರ ಆಮಿಷಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಇನ್ನು ಮುಂದೆಯಾದರೂ ಸಮಗ್ರ ತನಿಖೆ ನಡೆಸಿ ಸರ್ಕಾರಕ್ಕೆ ಸೇರಬೇಕಾದ ಜಮೀನುಗಳನ್ನು ವಶಪಡಿಸಿಕೊಂಡು ಉಳುಮೆದಾರರಿಗೆ ನೀಡಬೇಕು.

ಅಕ್ರಮ ಭೂಗಳ್ಳರು ಮತ್ತು ಅಕ್ರಮಕ್ಕೆ ಪ್ರೋತ್ಸಾಹಿಸಿದ ಅಧಿಕಾರಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.

ಇದೇ ವೇಳೆ ರೈತ ಸಂಘದ ಪದಾಧಿಕಾರಿಗಳು, ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ