LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಿಕ್ಷಾಟನೆ ಮೂಲಕ ಮಂಗಳಮುಖಿ ಜಮನಮ್ಮಳಿಂದ ಸಾಮೂಹಿಕ ಮದುವೆ!

Advertisement
ಸಿಂಧನೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಈಜೆ ಹೊಸಳ್ಳಿ ಗ್ರಾಮದಲ್ಲಿ ವಿಶಿಷ್ಟ ಸಮಾಜಮುಖಿ ಕಾರ್ಯೊಂದು ನಡೆಯಿತು. ಮಂಗಳಮುಖಿ ಜಮುನಮ್ಮ ಅವರ ನೇತೃತ್ವದಲ್ಲಿ ಆರನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಯಿತು. ಭಿಕ್ಷಾಟನೆ ಮೂಲಕ ಸಂಗ್ರಹಿಸಿದ ಹಣದಿಂದ ಬಡ ಜೋಡಿಗಳಿಗೆ ಮದುವೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ತಾಲೂಕಿನ ಈಜೆ ಹೊಸಳ್ಳಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಆರನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮಂಗಳಮುಖಿ ಜಮುನಮ್ಮ ಹಾಗೂ ಅವರ ತಂಡ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ದಿನಾಲು ಭಿಕ್ಷಾಟನೆ ಮಾಡಿ ಸಂಗ್ರಹಿಸಿದ ಹಣವನ್ನು ಜೋಡಿಸಿ ವರ್ಷಕ್ಕೊಮ್ಮೆ ಬಡ ಕುಟುಂಬಗಳ ಜೋಡಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಮೂಹಿಕ ವಿವಾಹ ಮಾಡಿಸುವ ಕಾರ್ಯವನ್ನು ಅವರು ನಡೆಸುತ್ತಿದ್ದಾರೆ
ಇಂದಿನ ದಿನಗಳಲ್ಲಿ ಸಾಮೂಹಿಕ ವಿವಾಹಗಳನ್ನು ರಾಜಕಾರಣಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಆಯೋಜಿಸುವುದು ಸಾಮಾನ್ಯ. ಆದರೆ ಸಿಂಧನೂರಿನಲ್ಲಿ ಮಂಗಳಮುಖಿಯರು ಭಿಕ್ಷೆಯಿಂದ ಬಂದ ಹಣದಲ್ಲೇ ಬಡವರಿಗೆ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು, ಗ್ರಾಮಸ್ಥರು ಭಾಗವಹಿಸಿ ನವದಂಪತಿಗಳಿಗೆ ಆಶೀರ್ವಾದ ನೀಡಿದರು.

ಒಟ್ಟಿನಲ್ಲಿ ಸಮಾಜದಲ್ಲಿ ಸಹಾಯದ ಮನೋಭಾವ ಇನ್ನೂ ಜೀವಂತವಾಗಿರುವುದನ್ನು ಈ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತೆ ಸಾಬೀತುಪಡಿಸಿದೆ ಎಂದು ಸಾರ್ವಜನಿಕರ ಮಾತಾಗಿದೆ.

ವರದಿ  : ಬಸವರಾಜ ಬುಕ್ಕನಹಟ್ಟಿ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ