
ಇಲಕಲ್ ನಗರದ ಈದ್ಗಾ ಮೈದಾನದಲ್ಲಿ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಕ್ತಿಯಿಂದ ಪಾಲ್ಗೊಂಡು ಮುಸ್ಲಿಂ ಬಂಧುಗಳಿಗೆ ಶುಭಾಶಯಗಳನ್ನು ತಿಳಿಸಿದರು.

ಅಂಜುಮನ್ ಸಂಸ್ಥೆಯ ಅಧ್ಯಕ್ಷರಾದ ಅಲ್ ಹಜ್ ಉಸ್ಮಾನ್ ಗಣಿ ಹುಮನಾಬಾದ್ ಸೇರಿದಂತೆ ಸಾವಿರಾರು ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಶಾಸಕರು ಈದ್ಗಾ ಮೈದಾನದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಸೀದಿ ಕಟ್ಟಡದ ಕಾಮಗಾರಿ ವೀಕ್ಷಿಸಿದರು.
ವರದಿ ದಾವಲ್ ಶೇಡಂ

