Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಂಕಾಕ್ ನ ಪಬ್ ನಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 27 ಜನ ಸಜೀವ ದಹನ 

Advertisement

ಬ್ಯಾಂಕಾಕ್: ಥೈಲ್ಯಾಂಡ್ ನ ರಾಜಧಾನಿ ಬ್ಯಾಂಕಾಕ್ ನಲ್ಲಿರುವ ಪಬ್ ವೊಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಉತ್ತರ ಬ್ಯಾಂಕಾಕ್ ನ 'ನಾ ಲಡ್ ಪ್ರಾ' (Na Ladprao) ಪಬ್ ನಲ್ಲಿ ಮಧ್ಯರಾತ್ರಿಯ ನಂತರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಕೆಲವೇ ನಿಮಿಷಗಳಲ್ಲಿ ಬೆಂಕಿಯ ಜ್ವಾಲೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದ್ದು, ಒಳಗೆ ಸಿಲುಕಿದ್ದ ಗ್ರಾಹಕರು ಹೊರಬರಲು ಪರದಾಡಿದರು.

ದಟ್ಟವಾದ ಕಪ್ಪು ಹೊಗೆಯು ಕಟ್ಟಡದ ತುಂಬೆಲ್ಲಾ ಆವರಿಸಿದ್ದರಿಂದ ಉಸಿರುಗಟ್ಟಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ.

ಘಟನಾ ಸ್ಥಳದಲ್ಲಿದ್ದ ಸಂಗೀತಗಾರರೊಬ್ಬರು ನೀಡಿದ ಮಾಹಿತಿ ಪ್ರಕಾರ, ವೇದಿಕೆಯ ಸಮೀಪವಿದ್ದ ಎಲೆಕ್ಟ್ರಿಕ್ ಸರ್ಕ್ಯೂಟ್ ಬ್ರೇಕರ್ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅದರ ಬೆನ್ನಲ್ಲೇ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 30 ನಿಮಿಷಗಳ ಕಾಲ ಹೋರಾಡಿ ಬೆಂಕಿಯನ್ನು ಹತೋಟಿಗೆ ತಂದರು.

ಥೈಲ್ಯಾಂಡ್ ಪ್ರಧಾನಿ ಅನುಟಿನ್ ಚರ್ನ್ವಿರಾಕುಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. 

ಅನೇಕ ಮೃತದೇಹಗಳು ಶೌಚಾಲಯದ ಬಳಿ ಪತ್ತೆಯಾಗಿದ್ದು, ಹೊಗೆಯಿಂದ ತಪ್ಪಿಸಿಕೊಳ್ಳಲು ಜನರು ಅಲ್ಲಿಗೆ ಓಡಿಹೋಗಿರಬಹುದು ಎಂದು ಅಂದಾಜಿಸಲಾಗಿದೆ.

ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಹಿಂದೆ 2022ರಲ್ಲಿ ಥೈಲ್ಯಾಂಡ್ ನ ಸಂಗೀತ ಪಬ್ನಲ್ಲಿ ನಡೆದಿದ್ದ ಅಗ್ನಿ ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ್ದರು.

ಇದಕ್ಕೂ ಮುನ್ನ 2009ರ ಹೊಸ ವರ್ಷದ ದಿನದಂದು ಸಂಭವಿಸಿದ್ದ ಸಾಂತಿಕಾ ನೈಟ್ ಕ್ಲಬ್ ದುರಂತದಲ್ಲಿ 66 ಜನರು ಮೃತಪಟ್ಟಿದ್ದರು. ಇಂತಹ ಘಟನೆಗಳು ಥೈಲ್ಯಾಂಡ್ ನಲ್ಲಿ ಪದೇ ಪದೇ ಮರುಕಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST