Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಕಾಕ ತಾಲೂಕಿನಾದ್ಯಂತ ಮೃಣಾಲ ಹೆಬ್ಬಾಳಕರ್ ಗೆ ಭಾರೀ ಬೆಂಬಲ

Advertisement
ಗೋಕಾಕ:-ಗೋಕಾಕ ತಾಲೂಕಿನ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪ್ರಚಾರ ನಡೆಸಿ, ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಗುರುತಾದ ಹಸ್ತಕ್ಕೆ ಮತ ನೀಡುವಂತೆ ಮನವಿ ಮಾಡಿದರು.



 

ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ನೆರವಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ತರುವ ಮೂಲಕ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದಿರುವ ಬಿಜೆಪಿ ಅಭ್ಯರ್ಥಿಯ ಮಾತಿಗೆ ಮರುಳಾಗಬೇಡಿ. ಚುನಾವಣೆಯ ನಂತರ ಅವರು ಯಾರ ಕೈಗೂ ಸಿಗುವುದಿಲ್ಲ. ಸ್ಥಳೀಯನಾಗಿರುವ ನನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

 

ಗೋಕಾಕ ವಿಧಾ‌ನಸಭಾ ಕ್ಷೇತ್ರದ ಮಕ್ಕಳಗೇರಿ, ಮಾಲದಿನ್ನಿ, ಉಪ್ಪಾರಟ್ಟಿ, ಮರಡಿ ಶಿವಾಪುರ ಹಾಗೂ ಮಮದಾಪುರ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡು ಮತಯಾಚಿಸಿದರು.ಹೋದಲ್ಲೆಲ್ಲ ಭಾರೀ ಬೆಂಬಲ ವ್ಯಕ್ತವಾಯಿತು. ಯಾವುದೇ ಕಾರಣದಿಂದ ಈ ಬಾರಿ ಬೆಳಗಾವಿಗೆ ಅನ್ಯಾಯ ಮಾಡಿರುವ ಹೊರಗಿನ ಅಭ್ಯರ್ಥಿಗೆ ಮತ ನೀಡುವುದಿಲ್ಲ. ಪಕ್ಷಾತೀತವಾಗಿ ಎಲ್ಲರೂ ಕಾಂಗ್ರೆಸ್ ಬೆಂಬಲಿಸುತ್ತೇವೆ ಎಂದು ಜನರು ಅಭಯ ನೀಡಿದರು.

ಈ ಸಮಯದಲ್ಲಿ‌ ಕಾಂಗ್ರೆಸ್ ವಕ್ತಾರೆ ತೇಜಸ್ವಿನಿ ಗೌಡ, ಕಾಂಗ್ರೆಸ್ ಮುಖಂಡರಾದ ಡಾ.ಮಹಾಂತೇಶ್ ಕಡಾಡಿ, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ