ನವದೆಹಲಿ: ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಹಾಗೂ ಸ್ಥಳೀಯವಾಗಿ ಉಂಟಾಗಬಹುದಾದ ಇಂಧನ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿದೆ.
ಇನ್ನು ಮುಂದೆ ಪೆಟ್ರೋಲ್ ಬಂಕ್ ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಮಾರಾಟ ಮಾಡಲು ಮಿತಿ ಹೇರಲಾಗಿದೆ.
ಇದರೊಂದಿಗೆ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಸಾರಿಗೆ ಸಂಸ್ಥೆಗಳಂತಹ 'ಗ್ರಾಹಕರು' (ಹೆಚ್ಚಿನ ಪ್ರಮಾಣದಲ್ಲಿ ಇಂಧನ ಬಳಸುವವರು) ಸಾಮಾನ್ಯ ಪೆಟ್ರೋಲ್ ಬಂಕ್‌ಗಳಿಂದ ಇಂಧನ ಖರೀದಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಜೂನ್ 11 ರಂದು 'ಮೋಟರ್ ಸ್ಪಿರಿಟ್ ಮತ್ತು ಹೈ ಸ್ಪೀಡ್ ಡೀಸೆಲ್ ನಿಯಂತ್ರಣ ಆದೇಶ 2026' ಅನ್ನು ಜಾರಿಗೊಳಿಸಿದ್ದು, ಈ ನಿಯಮಗಳು ಮುಂದಿನ 90 ದಿನಗಳವರೆಗೆ ಜಾರಿಯಲ್ಲಿರಲಿವೆ ಎಂದು ತಿಳಿಸಿದೆ.


