Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರತಿ ಪ್ರಶ್ನೆ ಪತ್ರಿಕೆ ಲಕ್ಷಕ್ಕೆ ಮಾರಾಟ : ಮಾಸ್ಟರ್ ಮೈಂಡ್ ಅರೆಸ್ಟ್

Advertisement

ನವದೆಹಲಿ: ಮೇ 3 ರಂದು ನಡೆದಿದ್ದ ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ 'ನೀಟ್' (NEET) ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ.

 ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ವಿಶೇಷ ತನಿಖಾ ತಂಡ (SIT) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್‌ಮೈಂಡ್ ಹಾಗೂ ಓರ್ವ ಎಂಬಿಬಿಎಸ್ ವಿದ್ಯಾರ್ಥಿ ಸೇರಿದಂತೆ ಒಟ್ಟು 40 ಜನರನ್ನು ಬಂಧಿಸಿದೆ.

ಬಂಧಿತ ಆರೋಪಿಗಳ ವಿವರ: ಪೊಲೀಸರ ಬಲೆಗೆ ಬಿದ್ದಿರುವ ಪ್ರಮುಖ ಆರೋಪಿಗಳನ್ನು ಮನೀಶ್ ಯಾದವ್ ಮತ್ತು ರಾಕೇಶ್ ಮಾಂಡವ್ರಿಯ ಎಂದು ಗುರುತಿಸಲಾಗಿದೆ. ಬಂಧಿತರ ಗುಂಪಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೂ ಸೇರಿರುವುದು ತನಿಖಾ ತಂಡಕ್ಕೆ ಆಘಾತ ತಂದಿದೆ.

ಪರೀಕ್ಷಾ ಅಕ್ರಮದ ಹಿಂದೆ ವ್ಯವಸ್ಥಿತ ಜಾಲವೊಂದು ಕೆಲಸ ಮಾಡುತ್ತಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸರು ಎಲ್ಲರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ವಾಟ್ಸ್‌ಅಪ್ ಮೂಲಕ ಪತ್ರಿಕೆ ಹಂಚಿಕೆ: ತನಿಖೆಯ ವೇಳೆ ಬಯಲಾದ ಅತ್ಯಂತ ದಿಗಿಲುಗೊಳಿಸುವ ವಿಷಯವೆಂದರೆ, ಪರೀಕ್ಷೆ ನಡೆಯುವ ಒಂದು ತಿಂಗಳ ಮೊದಲೇ ಈ ಜಾಲದ ಕೈಗೆ ಪ್ರಶ್ನೆ ಪತ್ರಿಕೆ ಸಿಕ್ಕಿತ್ತು.

ಆರೋಪಿಗಳು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವಾಟ್ಸ್‌ಅಪ್‌ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ರವಾನಿಸಿದ್ದರು. ಈ ಮೂಲಕ ಡಿಜಿಟಲ್ ಮಾಧ್ಯಮದ ಮೂಲಕ ಅತ್ಯಂತ ವೇಗವಾಗಿ ಪ್ರಶ್ನೆಗಳು ಹರಿದಾಡಿದ್ದವು.

ಈ ಪ್ರಶ್ನೆ ಪತ್ರಿಕೆಯನ್ನು ಉಚಿತವಾಗಿ ನೀಡದೆ, ಬರೋಬ್ಬರಿ 5 ಲಕ್ಷ ರೂಪಾಯಿಯ ದೊಡ್ಡ ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರತಿ ವಿದ್ಯಾರ್ಥಿಯಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಪರೀಕ್ಷಾ ಅಕ್ರಮ ಎಸಗಲು ಈ ತಂಡ ಸಾಥ್ ನೀಡಿತ್ತು. ಹಣದ ಆಸೆಗೆ ಬಿದ್ದು ಅರ್ಹ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಈ ಜಾಲ ಆಟವಾಡಿರುವುದು ಈಗ ಸಾಬೀತಾಗಿದೆ.

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ