ಬೆಂಗಳೂರು : ಔಷಧಿಗಳ ಆನ್‍ಲೈನ್ ಮಾರಾಟ, ಔಷಧ ವ್ಯಾಪಾರ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ವಿವಿಧ ವಿಷಯಗಳ ವಿರುದ್ಧ ಪ್ರತಿಭಟನೆಯಾಗಿ, ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗಿಸ್ಟ್ (AIOCD) ಸಂಸ್ಥೆಯು ಮೇ 20ರಂದು ದೇಶವ್ಯಾಪಿ ವೈದ್ಯಕೀಯ ಅಂಗಡಿಗಳ ಬಂದ್‍ಗೆ ಕರೆ ನೀಡಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆ, ಅಗತ್ಯ ಔಷಧಿಗಳ ಲಭ್ಯತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ಬಂದ್ ಅವಧಿಯಲ್ಲಿ ಸಾರ್ವಜನಿಕರು ಮತ್ತು ವಿವಿಧ ಇಲಾಖೆಗಳಿಗೆ ಪ್ರಮುಖ ಮಾರ್ಗಸೂಚಿಗಳನ್ನು ನೀಡಿದೆ.


