Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ರಾಜ್ಯ ಸರ್ಕಾರ ಆಸಕ್ತಿ ತೋರಿದರೆ, ಅಧಿಕಾರಿಗಳು ಆಸಕ್ತಿ ತೋರುತ್ತಾರೆ: ಜಗದೀಶ ಶೆಟ್ಟರ್

Advertisement


'ನರೇಂದ್ರ ಮೋದಿ ಪ್ರಧಾನಿಯಾದ ನಂತರ ಯೋಗಕ್ಕೆ ಹೆಚ್ಚಿನ ಮಹತ್ವ ಸಿಕ್ಕಿದೆ. ಇಂದು ಇಡೀ ವಿಶ್ವದಲ್ಲೇ ಯೋಗ ದಿನ ಆಚರಿಸುತ್ತಿರುವ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಇದು ಬಹಳ ಸಂತೋಷದ ಸಂಗತಿ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗದಲ್ಲಿ ಭಾಗಿಯಾಗಬೇಕು' ಎಂದು ಕೋರಿದರು






ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ, ಸುದ್ದಿಗಾರರ ಜತೆ ಮಾತನಾಡಿದರು. 'ಯೋಗ ಮಾಡುವುದರಿಂದ ನಮಗೆ ಮಾನಸಿಕ ಮತ್ತು ದೈಹಿಕವಾಗಿ ನೆಮ್ಮದಿ ಸಿಗುತ್ತದೆ. ಯೋಗಕ್ಕೆ ಹೆಚ್ಚಿನ ಮಹತ್ವ ಕೊಟ್ಟರೆ ಯುವಜನಾಂಗ ದಾರಿ ತಪ್ಪುವುದು ಕಡಿಮೆಯಾಗುತ್ತದೆ' ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಯೋಗ ದಿನಾಚರಣೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಗೈರಾದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, 'ಅಧಿಕಾರಿಗಳು ಏಕೆ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ವಿಚಾರಿಸುತ್ತೇನೆ. ಎಲ್ಲರೂ ಭಾಗಿಯಾದರೆ ಯೋಗಕ್ಕೆ ಹೆಚ್ಚಿನ ಮಹತ್ವ ಸಿಗುತ್ತದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಆಸಕ್ತಿ ತೋರಿದರೆ, ಅಧಿಕಾರಿಗಳು ಆಸಕ್ತಿ ತೋರುತ್ತಾರೆ. ಮುಖ್ಯಮಂತ್ರಿ ಯೋಗ ದಿನಾಚರಣೆಯಲ್ಲಿ ಭಾಗಿಯಾದರೆ ಸಾಲದು. ಯೋಗ ದಿನಾಚರಣೆಯಲ್ಲಿ ಕಡ್ಡಾಯವಾಗಿ ಭಾಗಿಯಾಗುವಂತೆ ಎಲ್ಲ ಅಧಿಕಾರಿಗಳಿಗೂ ಅವರು ನಿರ್ದೇಶನ ನೀಡಬೇಕು  ಎಂದರು. ಕೇಂದ್ರ ಸರ್ಕಾರದ ನಿರ್ದೇಶದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಆದರೆ, ರಾಜ್ಯ ಸರ್ಕಾರವೂ ಆಸಕ್ತಿ ವಹಿಸಿತ್ತಿಲ್ಲ ಎಂದು ಶೆಟ್ಟರ್ ಬೇಸರ ವ್ಯಕ್ತಪಡಿಸಿದರು.




Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ