Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಇಎಸ್ ಉದ್ಧಟತನ : ಜಿಲ್ಲಾಧಿಕಾರಿ ಕಚೇರಿ ಎದುರು ಕನ್ನಡ ಕಡ್ಡಾಯಕ್ಕೆ ವಿರೋಧ 

Advertisement

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ (ಮಹಾರಾಷ್ಟ್ರ ಏಕಿಕರಣ ಸಮಿತಿ)​ ಮತ್ತೆ ಪುಂಡಾಟ ಮೆರೆದಿದೆ. ರಾಜ್ಯ ಸರ್ಕಾರದ ಕನ್ನಡ ಕಡ್ಡಾಯ ಆದೇಶ ವಿರೋಧಿಸಿ ಪೊಲೀಸರ ಎದುರಲ್ಲೇ ಹುಚ್ಚಾಟ ನಡೆಸಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ಆದೇಶವನ್ನು ಹರಿದು ಉದ್ಧಟತನ ಮೆರೆದಿದ್ದಾರೆ.ಮರಾಠಿ ಭಾಷೆಯಲ್ಲಿ ನಾಮಫಲಕ, ದಾಖಲೆಗಳನ್ನು ನೀಡುವಂತೆ ಪ್ರತಿಭಟಿಸಿದ್ದಾರೆ.

ಕನ್ನಡ ಕಡ್ಡಾಯ ವಿರೋಧಿಸಿ ಎಂಇಎಸ್ ಕಾರ್ಯಕರ್ತರು ಕ್ಯಾತೆ ತೆಗೆದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರದ ದಾದಾಗಿರಿ ನಡೆಯುವುದಿಲ್ಲ. ಬೆಳಗಾವಿ, ಖಾನಾಪುರ, ನಿಪ್ಪಾಣಿ, ಕಾರವಾರ, ಬೀದರ್ ಹಾಗೂ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಎಂದು ಘೋಷಣೆಗಳನ್ನು ಕೂಗಿದ್ದಾರೆ.

 ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಎಂಇಎಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಇದೇ ವೇಳೆ ಎಂಇಎಸ್ ಪುಂಡಾಟಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಂಇಎಸ್ ಪುಂಡರನ್ನ ಬಂಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರಿಂದ ನಗರದ ಎಸ್​​​ಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಎಂಇಎಸ್ ಪುಂಡರು ಡಿಸಿ ಕಚೇರಿ ಆವರಣದಲ್ಲೇ ಸರ್ಕಾರದ ಆದೇಶದ ಪ್ರತಿಗಳನ್ನು ಹರಿದು ಹಾಕುತ್ತಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಎಂಇಎಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ನಾಡದ್ರೋಹಿ ಎಂಇಎಸ್ ಮತ್ತು ಶಿವಸೇನೆಯನ್ನು ನಿಷೇಧಿಸಬೇಲು ಎಂದು ಆಗ್ರಹಿಸಿದ್ದಾರೆ. ಬಳಿಕ ಮೆರವಣಿಗೆಯಲ್ಲಿ ಸಾಗಿ ಬೆಳಗಾವಿ ಎಸಿಗೆ ಮನವಿ ಸಲ್ಲಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST