LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕ್ರೀಡಾ ಮನೋಭಾವ ಬೆಳೆಸೋಣ ಆರೋಗ್ಯವಂತ ಸಮಾಜ ಕಟ್ಟೋಣ: ಶಂಕರಪ್ಪ ನಕ್ಕುಂದಿ

Advertisement

ಮಾನ್ವಿ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮವಾದ ಆರೋಗ್ಯವನ್ನು ಬೆಳಸಿಕೊಂಡು ಕ್ರೀಡಾ ಮನೋಭಾವ ಬೆಳೆಸೋಣ ಆರೋಗ್ಯವಂತ ಸಮಾಜ ಕಟ್ಟೋಣ ಎಂದು ಶ್ರೀ ವೆಂಕಟೇಶ ಪ್ರೌಢ ಶಾಲೆಯ ಆಡಳಿತಾಧಿಕಾರಿಗಳಾದ ಶಂಕರಪ್ಪ ನಕ್ಕುಂದಿ ಹೇಳಿದರು. ಪಟ್ಟಣದ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟೀಯ ಸೇವಾ ಯೋಜನೆಯ ವತಿಯಿಂದ ಹಾಕಿ ಮಾಂತ್ರಿಕ ದ್ಯಾನ್ ಚಂದರವರ ಜನ್ಮದಿನದ ಅಂಗವಾಗಿ ರಾಷ್ಟೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಯಾಗಿ ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಮೈದಾನದಲ್ಲಿ ದೇಹವನ್ನು ದಣಿಸುವ ಕೆಲಸವನ್ನು ಮಾಡಿ ಎಂದು ಹೇಳಿದರು. ಇನೊರ್ವ ಉಪನ್ಯಾಸಕರಾದ ಅಂಬಣ್ಣ ನಾಯಕ ಉಮಳಿ ಹೊಸೂರು ಮಾತನಾಡಿ ಹಾಕಿ ಮಾಂತ್ರಿಕ ದ್ಯಾನ್ ಚಂದ್ ರವರ ಜೀವನ ಅವರು ನಡೆದು ಬಂದ ದಾರಿಯ ಬಗ್ಗೆ ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ರಾಷ್ಟೀಯ ಸೇವಾ ಯೋಜನೆಯ ಅಧಿಕಾರಿಗಳಾದ ಶರಣಬಸವ ಕರಡಿಗುಡ್ಡ ಮಾತನಾಡಿ ವಿದ್ಯಾರ್ಥಿಗಳು ಪ್ರತಿದಿನ ಯೋಗ ಮತ್ತು ಧ್ಯಾನ ಮಾಡುವುದರಿಂದ ಆರೋಗ್ಯವಂತರಾಗಿ ಬಾಳಬಹುದು ಎಂದು ಹೇಳಿದರು.

ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷರಾದ ಆಂಜನೇಯ ನಸಲಾಪುರ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಬಾಳಬೇಕೆಂದರೆ ದಿನಕ್ಕೆ ಒಂದು ಘಂಟೆಯಾದರೂ ದೇಹವನ್ನು ದಂಡಿಸಬೇಕು. ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಅದಕ್ಕಾಗಿ ಆರೋಗ್ಯವನ್ನು ಕಾಪಾಡಿಕೊಂಡು ಸಮಾಜದಲ್ಲಿ ಉತ್ತಮವಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುಧಾ ನಿರೂಪಿಸಿದರೆ ಹುಲಿಗೆಮ್ಮ ಸ್ವಾಗತಿಸಿದರು ಕವಿತಾ ವಂದಿಸಿದರು.
ವರದಿ : ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್