Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರೇ ಕುಡಿ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ಭ್ರಷ್ಟಾಚಾರ ಆರೋಪ ಪಂಚಾಯತಿಗೆ ಬೀಗ.

Advertisement
ಚಿಕ್ಕೋಡಿ : ಹಿರೇಕೊಡಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಕೆಲವು ಸದಸ್ಯರು ಲಕ್ಷಾಂತರ ರೂಪಾಯಿಗಳ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪಿಸಿ 19 ಸದಸ್ಯರು ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಪ್ರಯತ್ನಿಸಿ, ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಘಟನೆ ನಡಿದಿದೆ.

ಒಟ್ಟು 30 ಗ್ರಾಮ ಪಂಚಾಯತ್ ಸದಸ್ಯರ ಬಲ ಹೊಂದಿರುವ ಹಿರೇಕೊಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಕೆಲವು ಸದಸ್ಯರು ಲಕ್ಷಾಂತರ ರೂಪಾಯಿಗಳ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಸದಸ್ಯರು ಇವತ್ತು ಅವಿಶ್ವಾಸ ಮಂಡನೆಗೆ ಮುಂದಾಗಿದ್ದರೂ.

ಚಿಕ್ಕೋಡಿ ಉಪವಿಭಾಗ ಅಧಿಕಾರಿ ಸುಭಾಷ ಸಂಪಗಾವಿ ನೇತೃತ್ವದಲ್ಲಿn ಅವಿಶ್ವಾಸಕ್ಕಾಗಿ ಸಭೆ ನಡೆಸಲಾಯಿತು. ಆದರೆ 19 ಸದಸ್ಯರು ಮಾತ್ರ ಸಭೆಗೆ ಆಗಮಿಸಿದ್ರು. ಆವಿಶ್ವಾಸಕ್ಕೆ ಕನಿಷ್ಠ 2 0 ಸದಸ್ಯರು ಬೇಕಾದ ಹಿನ್ನಲೆ ಒರ್ವ ಸದಸ್ಯ ಸಂಖ್ಯೆ ಕಡಿಮೆಯಾಗಿ ಅವಿಶ್ವಾಸ ನಿರ್ಣಯ ಮಂಡನೆ ವಿಫಲವಾಗಿದೆ.

ಆನಂತರ 19 ಸದಸ್ಯರು ಹಾಗೂ ಸದಸ್ಯ ಆನಿತಾ ವಿಕ್ರಂ ಬನಗೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ ತಪ್ಪಿಸ್ಥರನ್ನು ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು.

ಅದೇ ರೀತಿ ಈ ಸಂದರ್ಭದಲ್ಲಿ ಆಕ್ರೋಶಗೊಂಡ ಗ್ರಾಮ ಪಂಚಾಯತ್ ಸದಸ್ಯರೂ ಹಾಗೂ ಗ್ರಾಮಸ್ಥರು ಹಿರೇಕೊಡಿ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಹಾಕಿದ ಘಟನೆ ನಡೆಯಿತು.

ಉಪವಿಭಾಗಾಧಿಕಾರಿಗಳು ಚಿಕ್ಕೋಡಿಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ ಹಾಗೂ ಸದಸ್ಯರ ಜೊತೆ ಸಭೆ ಮಾಡಿ ನ್ಯಾಯ ಒದಗಿಸುವ ಭರವಸೆ ನೀಡಿದರು.
ಸ್ಥಳಕ್ಕೆ ಡಿಪಿಐ ವಿಶ್ವನಾಥ ಚೌಗಲಾ, ಬಸಗೌಡ ನೆರ್ಲಿ ಭೇಟಿ ನೀಡಿ ಬಿಗಿ ಬಂದೋಬಸ್ತ ಏರ್ಪಡಿಸಲಾಗಿದೆ.

ಕೆಲವು ಕಾಲ ಹಿರೇಕೊಡಿ ಗ್ರಾಮ ಪಂಚಾಯತ ಹಾಗೂ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವರದಿ : ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ