LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂಗನವಾಡಿ ಕೇಂದ್ರ, ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಹೆಬ್ಬಾಳಕರ್

Advertisement
ಬೀದರ್: ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಜೊತೆಗೆ ಮಕ್ಕಳ ಕಲಿಕಾ ಆಸಕ್ತಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.



ಮೊಟ್ಟೆ ಗಳನ್ನು ಕೊಟ್ಟಿದ್ದಾರಾ? ಪಾಯಸ ತಿಂದಿದ್ದೀರಾ? ಎಂದು ಮಕ್ಕಳಲ್ಲಿ ವಿಚಾರಿಸಿ ಮಾಹಿತಿ ಪಡೆದ ಸಚಿವರು, ಅಂಗನವಾಡಿ ಕೇಂದ್ರದಲ್ಲಿ ತಯಾರಿಸಿದ ಚಿಕ್ಕಿಯನ್ನು ಸೇವಿಸಿ ಗುಣಮಟ್ಟ ಪರಿಶೀಲಿಸಿದರು. ಬಳಿಕ ಮೈಲೂರದಲ್ಲಿರುವ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಬಸವರಾಜ್ ಪಾಟೀಲ್, ಸರ್ಕಾರದ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ‌ ಬಿ.ಎಚ್. ನಿಶ್ಚಲ್, ಇಲಾಖೆಯ ಉಪ ನಿರ್ದೇಶಕ ಶ್ರೀಧರ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ‌
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ