Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

100 ಹಾಸಿಗೆಗಳ ತಾಲೂಕಾ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಿದ ಸಚಿವ ದಿನೇಶ್ ಗುಂಡೂರಾವ್

Advertisement
ಬೆಳಗಾವಿ :ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಳಗಾವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ರಾಮದುರ್ಗದಲ್ಲಿ 100 ಹಾಸಿಗೆಗಳ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರು ಶಂಕುಸ್ಥಾಪನೆ ನೆರವೇರಿಸಿದರು.

ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಸಚಿವರು “ಇವತ್ತು ರಾಮದುರ್ಗದಲ್ಲಿ 100 ಬೆಡ್ ಗಳ ಸಾರ್ವಜನಿಕ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿರುವುದು ಸಂತೋಷದ ಸಂಗತಿ. ಸುಮಾರು 33 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಅತ್ಯಾಧುನಿಕ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಇವತ್ತು ರಾಮದುರ್ಗದಲ್ಲಿ ಈ ಅತ್ಯಾಧುನಿಕ ಸಾರ್ವಜನಿಕ ಆಸ್ಪತ್ರೆ ನಿರ್ಮಾಣವಾಗಬೇಕಾದರೆ ಅದಕ್ಕೆ ಮುಖ್ಯ ಕಾರಣ ಶಾಸಕ ಅಶೋಕ ಪಟ್ಟಣರವರು. ಸದಾ ಅಭಿವೃದ್ಧಿ ಪರ ಮತ್ತು ಕ್ಷೇತ್ರದ ಜನರ ಕಾಳಜಿ ವಹಿಸುವವರಾಗಿದ್ದು ತಮ್ಮ ರಾಮದುರ್ಗ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಹೇಳಿದರು.



ನಂತರ ಶಾಸಕ ಅಶೋಕ ಪಟ್ಟಣರವರು ಮಾತನಾಡಿ “ ನಮ್ಮ ರಾಮದುರ್ಗಕ್ಕೆ ಒಂದು ಆಧುನಿಕ ಆಸ್ಪತ್ರೆಯ ಅವಶ್ಯಕತೆ ಇತ್ತು. ಸಚಿವ ದಿನೇಶ್ ಗುಂಡೂರಾವ್ ರವರು ನಮ್ಮ ಮನವಿಗೆ ಸ್ಪಂದಿಸಿ ರಾಮದುರ್ಗಕ್ಕೆ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಯನ್ನು ಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಮತ್ತು ಇದರ ಜತೆಗೆ ಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆಯೊಂದನ್ನು ನಿರ್ಮಿಸಬೇಕೆಂದು ಸಚಿವರಿಗೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಪುಷ್ಪಾ ಉಪ್ಪಾರ ಜಂಟಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಪ್ರಕಾಶ ಹೊಳೆಪ್ಪಗೋಳ, ವಿನಯ ನವಲಗಟ್ಟಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಬೆಳಗಾವಿ, ಸುನೀಲ್ ಹಣಮಕ್ಕನವರ, ಐ.ಪಿ. ಗಡಾದ ಡಿಎಚ್ಓ, THO ನವೀನ್ ನಿಜಗುಲಿ,ಇ ಓ ಬಸವರಾಜ ಐನಾಪುರ, ಚಿದಾನಂದ ಉಪಸ್ಥಿತರಿದ್ದರು.

ವರದಿ: ಮಂಜುನಾಥ ಕಲಾದಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ