Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವೆ ಹೆಬ್ಬಾಳ್ಕರ್

Advertisement
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ.

ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಈ ಐಲ್ಯಾಂಡ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ ಗಳೂ ನಿರ್ಲಕ್ಷ್ಯಕ್ಕೊಳಗಾಗಿದೆ. ಇಂತಹ ಅತ್ಯದ್ಭುತ ಸಂಪನ್ಮೂಲಗಳಿದ್ದರೂ ನಾವು ಪ್ರವಾಸೋದ್ಯಮದ ದೃಷ್ಟಿಯಿಂದ ಬಳಸಿಕೊಳ್ಳಲು ವಿಫಲರಾಗಿದ್ದೇವೆ.

ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಕರಾವಳಿ ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ ಇಡೀ ದಿನ ವಿಚಾರಸಂಕಿರಣವೊಂದನ್ನು ಆಯೋಜಿಸಲಾಗಿತ್ತು.

ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕರಾವಳಿ ಜಿಲ್ಲೆಗಳ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿರುವ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಸಲು ನಾವು ಹೆಜ್ಜೆ ಇಟ್ಟಿದ್ದೇವೆ. ರಾಜ್ಯ ಸರಕಾರದ ಈ ಹೊಸ ಯೋಜನೆಗೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ನಿಮ್ಮೆಲ್ಲರ ಸಲಹೆ, ಮಾರ್ಗದರ್ಶನದೊಂದಿಗೆ ಮುಂದಿನ ದಿನಗಳಲ್ಲಿ ಈ ಭಾಗವನ್ನು ಅಭಿವೃದ್ದಿಪಡಿಸೊಣಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಹಳ ಅಪರೂಪದ ಕಾರ್ಯಕರ್ಮದಲ್ಲಿ ನಾವು - ನೀವೆಲ್ಲ ಭಾಗವಹಿಸಿದ್ದೇವೆ. ಕರ್ನಾಟಕದ ಅತೀ ದೊಡ್ಡ ಐಲ್ಯಾಂಡ್ ಎನ್ನುವ ಹೆಮ್ಮೆಗೆ ಕೂಡ ಪಾತ್ರವಾಗಿರುವ ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಇಂದು ಧ್ವಜಾರೋಹಣ ನೆರವೇರಿಸುವ ಮತ್ತು ನಿಮ್ಮನ್ನೆಲ್ಲ ಉದ್ಧೇಶಿಸಿ ಮಾತನಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ನಾನು ಬರುವಾಗ ಮೊಟ್ಟ ಮೊದಲ ಬಾರಿಗೆ ಕರಾವಳಿ ಕಾವಲು ಪಡೆಯ 11 ಬೋಟ್ ಗಳನ್ನು ಇನಸ್ಪೆಕ್ಷನ್ ಮಾಡುತ್ತ ಬಂದೆ. ಇದು ನನಗೆ ಬಹಳ ರೋಮಾಂಚಕಾರಿ ಅನುಭವವಾಗಿದೆ ಎಂದರು.

ಇಲ್ಲಿ ಕರಾವಳಿ ಕಾವಲುಪಡೆಯ ಪೊಲೀಸರಿದ್ದೀರಿ, ಉದ್ಯೋಗದ ಜೊತೆಗೆ ರಾಷ್ಟ್ರ ರಕ್ಷಣೆಯಲ್ಲೂ ಮಾಹಿತಿದಾರರಾಗಿ ಕೆಲಸ ಮಾಡುತ್ತಿರುವ ಮೀನುಗಾರರಿದ್ದೀರಿ, ಬೀಚ್ ಸ್ವಚ್ಛತೆಗೆಂದು ಬಂದಿರುವ ಸ್ವಯಂ ಸೇವಕರಿದ್ದೀರಿ, ಕರಾವಳಿ ನಾವಿಕ ದಳದ ಸಿಬ್ಬಂದಿ ಇದ್ದೀರಿ. ನಮ್ಮ ದೇಶದ ಸುರಕ್ಷತೆಗಾಗಿ ಮತ್ತು ನಮ್ಮ ದೇಶದ ಜನರ ಸುರಕ್ಷತೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಹಗಲು -ರಾತ್ರಿ ಕೆಲಸ ಮಾಡುತ್ತಿರುವ ನೀವೆಲ್ಲ ನನ್ನ ದೃಷ್ಟಿಯಲ್ಲಿ ನಿಜವಾದ ದೇಶಭಕ್ತರು, ನಿಜವಾದ ಹೀರೋಗಳು. ನಿಮ್ಮ ಸೇವೆಗೆ ನಾನು ನಮಸ್ಕಾರಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಗೂ ಗಮನ ನೀಡುವುದನ್ನು ಮರೆಯಬೇಡಿ ಎಂದು ಸಚಿವರು ವಿನಂತಿಸಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ