Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 20ರಂದು 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ : ಸಚಿವ ಕೃಷ್ಣಬೈರೇಗೌಡ 

Advertisement
ಚಿತ್ರದುರ್ಗ : ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಸೂಚನೆ ನೀಡಿದರು.

ಕಂದಾಯ ಗ್ರಾಮಗಳ ರಚನೆಗೆ ಜಿಲ್ಲೆಯಲ್ಲಿ ಒಟ್ಟು 316 ಗ್ರಾಮಗಳ ಗುರುತಿಸಲಾಗಿದ್ದು, ಈಗಾಗಲೇ 296 ಪ್ರಾಥಮಿಕ ಸೂಚನೆ ಹಾಗೂ 206 ಅಂತಿಮ ಅಧಿಸೂಚನೆಯಾಗಿದೆ. ಇನ್ನೂ 61 ಗ್ರಾಮಗಳು ಅಂತಿಮ ಅಧಿಸೂಚನೆಗೆ ಬಾಕಿ ಇದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿಯಲ್ಲಿ ವಸತಿ ಪ್ರದೇಶಗಳ ಪಟ್ಟಿ ಇದೆ. ಕಂದಾಯ ಗ್ರಾಮಗಳ ಸಂಖ್ಯೆಗಿಂತ ವಸತಿ ಪ್ರದೇಶಗಳ ಸಂಖ್ಯೆ ಹೆಚ್ಚಿದೆ. ಇಲ್ಲಿ ದಾಖಲೆ ರಹಿತ ವಸತಿ ಪ್ರದೇಶಗಳ ಎಂಟ್ರಿ ಇರುತ್ತವೆ.

ಕಂದಾಯ ಇಲಾಖೆಯ ಬಳಿ ದಾಖಲೆ ಸಹಿತ ಗ್ರಾಮಗಳ ಮಾಹಿತಿ ಇರುತ್ತದೆ ಎಂದು ತಿಳಿಸಿದ ಅವರು, ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗಮನಿಸಿ, ಗ್ರಾಮ ರಚನೆ ಮಾಡಬೇಕು. ದಾಖಲೆ ರಹಿತ ಇದ್ದಲ್ಲಿ ಅವರಿಗೆ ಒಂದು ದಾಖಲೆ ಕಲ್ಪಿಸಿ, ಬದುಕು ಕಲ್ಪಿಸಿಕೊಡಬೇಕಿದೆ.

ಈಗಾಗಲೆ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ನಿವೇಶನ, ಕಟ್ಟಡಗಳಿಗೆ ಬಿ-ಖಾತಾ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿಯೂ ಅನಧಿಕೃತವಾಗಿ ರಚನೆಯಾಗಿರುವ ಕಂದಾಯ ನಿವೇಶನ, ಕಟ್ಟಡಗಳಿಗೂ ಬಿ-ಖಾತಾ ವಿತರಣೆಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಹತ್ತು ದಿನಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಜನರ ಬದುಕಿಗೆ ನಿಶ್ಚಿತತೆ ಇರಬೇಕು. ಹಾಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದರು.

ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂನ್ 30 ರ ಗಡುವನ್ನು ನಿಗದಿಪಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಜನಗಣತಿ ಕಾರ್ಯದ ಪ್ರಕ್ರಿಯೆ ಆರಂಭವಾದರೆ, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು ಎರಡು ವರ್ಷ ಆಗಬಹುದು. ಹೀಗಾಗಿ ಬಾಕಿ ಇರುವ ಎಲ್ಲ ಕಂದಾಯ ಗ್ರಾಮಗಳ ರಚನೆ ಕಾರ್ಯ ಜೂ. 30 ರ ಒಳಗಾಗಿ ಪೂರ್ಣಗೊಳ್ಳಬೇಕು ಎಂದು ತಾಕೀತು ಮಾಡಿದರು.

ಗ್ರಾಮದ 1 ಕಿ.ಮೀ ವ್ಯಾಪ್ತಿ ಒಳಗೆ ಇದ್ದು, 10 ಮನೆಗಳಿಗಿಂತಲೂ ಹೆಚ್ಚು ಇದ್ದರೆ ಉಪ ಗ್ರಾಮ ರಚನೆ ಮಾಡಲು ಅವಕಾಶ ಇದೆ. ಜನರಿಗೆ ನಾವು ಸ್ಥಿರ ಬದುಕು ನೀಡಬೇಕು. ಬಿಟ್ಟು ಹೋಗಿರುವ ಕಂದಾಯ ಗ್ರಾಮಗಳ ರಚನೆ ಹಾಗೂ ಗುರುತಿಸುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಯಾದವ ಹಾಗೂ ತಾಂಡಾ ಸಂಘದವರಿಂದ ಮಾಹಿತಿ ಪಡೆದು ಗ್ರಾಮ ಪಂಚಾಯಿತಿಯಿಂದ ಜನವಸತಿ ಪಟ್ಟಿ ಪಡೆಯುವಂತೆ ಸಚಿವರು ಸೂಚನೆ ನೀಡಿದರು.

 

ಕಂದಾಯ ಗ್ರಾಮಗಳ ಫಲಾನುಭವಿಗಳ ಹಕ್ಕುಪತ್ರ ನೊಂದಣಿ :

 

ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳ ಹಕ್ಕುಪತ್ರ ಹಾಗೂ ಆಸ್ತಿ ನೊಂದಣಿಗೆ ಸಂಬಂಧಿಸಿದಂತೆ ಒಟ್ಟು 6393 ಕುಟುಂಬಗಳ ದಾಖಲೆಗಳಿಗೆ ಆಯಾ ತಹಸಿಲ್ದಾರರು ಅನುಮೋದನೆ ನೀಡಿದ್ದು, 4305 ಡೀಡ್‍ಗಳಿಗೆ ತಹಸಿಲ್ದಾರರು ಸಹಿ ಮಾಡಿರುತ್ತಾರೆ. ಈವರೆಗೆ 2888 ಫಲಾನುಭವಿಗಳಿಗೆ ಕಾವೇರಿ ತಂತ್ರಾಂಶದಲ್ಲಿ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಲಾಗಿದ್ದು, 2403 ಫಲಾನುಭವಿಗಳ ಇ-ಸ್ವತ್ತು ನೋಟಿಸ್ ಜನರೇಟ್ ಮಾಡಲಾಗಿದೆ. ಎಲ್ಲ ಫಲಾನುಭವಿಗಳ ಹಕ್ಕುಪತ್ರ ನೊಂದಣಿ ದಾಖಲೆ ಹಾಗೂ ಇ-ಸ್ವತ್ತು ತಯಾರಿಸುವ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಕಂದಾಯ ಸಚಿವರಿಗೆ ಭರವಸೆ ನೀಡಿದರು.

ಇದೇ ಮೇ.20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ 01 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ, ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಾವು ಮಾಡಿರುವ ಕೆಲಸವನ್ನು ಜನರಿಗೆ ಸಮರ್ಪಣೆ ಮಾಡುತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಇದು 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮ ಅಲ್ಲ, ನಾವು ಮಾಡಿರುವ ಮಹತ್ವಪೂರ್ಣ ಕಾರ್ಯವನ್ನು ಜನರಿಗೆ ಸಮರ್ಪಿಸಿ, ಅವರ ಬದುಕಿಗೆ ಸ್ಥಿರತೆ ತಂದು ಕೊಡುವ ಅರ್ಥಪೂರ್ಣ ಕಾರ್ಯಕ್ರಮ ಇದಾಗಲಿದೆ.

ಜನರಿಗೆ ಶಕ್ತಿ ತುಂಬುವ ಮೂಲಕ ಸರ್ಕಾರದ ಎರಡು ವರ್ಷಗಳ ಸಾಧನೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ, ದಾಖಲೆ ವಿತರಿಸುವ ಮೂಲಕ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಎಲ್ಲ ಸಚಿವರು ಭಾಗವಹಿಸಲಿದ್ದು, ನಮ್ಮ ಸರ್ಕಾರ ಜನಪರ ಹಾಗೂ ಬಡವರ ಪರವಾಗಿದೆ.

ರಾಜ್ಯದ ಜನತೆಗೆ ಸಮರ್ಪಿಸಲು 2 ವರ್ಷದ ಸಾಧನೆ ಕಾರ್ಯಕ್ರಮ ವೇದಿಕೆಯಾಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಈ ಕಾರ್ಯಕ್ರಮಕ್ಕೆ ಪ್ರತಿ ಫಲಾನುಭವಿ ಜೊತೆಗೆ ಅವರ ಕುಟುಂಬ ಸದಸ್ಯರೊಬ್ಬರು ಆಗಮಿಸುವ ರೀತಿ ವ್ಯವಸ್ಥೆ ಮಾಡಲಾಗುತ್ತಿದೆ.

ಚಿತ್ರದುರ್ಗ ಜಿಲ್ಲೆಯಿಂದಲೂ ವಿವಿಧ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಸಮರ್ಪಕವಾಗಿ ಕರೆತರುವ ರೀತಿಯಲ್ಲಿ ವ್ಯವಸ್ಥೆ ಕೈಗೊಳ್ಳಬೇಕು, ಹಾಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಫಲಾನುಭವಿ ಹಾಗೂ ಕುಟುಂಬದ ಒರ್ವ ಸದಸ್ಯರನ್ನು ಕರೆತರುವ ಮೂಲಕ ಸವಲತ್ತು ವಿತರಣಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ