Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ತೊಂದರೆ ಆಗದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

Advertisement
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.



 

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆ ಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದರು‌.



* ಅಂಗನವಾಡಿ ಕೇಂದ್ರದ ಹೆಸರು ಬದಲಾವಣೆಗೆ ಚಿಂತನೆ
ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ. ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಅಂಗನವಾಡಿ ಕೇಂದ್ರಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಅಂಗನವಾಡಿ ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಬಿ. ಅಮ್ಜದ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ