Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

Advertisement
ಬೆಳಗಾವಿ : -ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಸರಣಿ ಮುಂದುವರಿದಿದ್ದು, ಶುಕ್ರವಾರ ಹಿಂಡಲಗಾದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ ನೆರವೇರಿಸಿ ಚಾಲನೆ ನೀಡಿದರು.


ಗ್ರಾಮದ ಸಾಯಿನಂದನ್ ರೆಸಿಡೆನ್ಸಿ ಹಾಗೂ ರಕ್ಷಕ್ ಕಾಲೋನಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಿ, ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.



ಇಲಾಖೆಯ ಕೆಲಸ ಕಾರ್ಯಗಳು, ಬಿಡುವಿಲ್ಲದ ಪ್ರವಾಸದ ಮಧ್ಯೆಯೂ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಿರುವ ಸಚಿವರು, ಸ್ಥಳದಲ್ಲಿಯೇ ಸಾರ್ವಜನಿಕರ ಕುಂದುಕೊರತೆಗಳನ್ನೂ ಆಲಿಸಿ, ಪರಿಹಾರ ಒದಗಿಸಿದರು.ಗ್ರಾಮೀಣ ಕ್ಷೇತ್ರ ನನ್ನ ಕುಟುಂಬದಂತಿದೆ. ಎಷ್ಟೇ ಕೆಲಸದ ಒತ್ತಡವಿದ್ದರೂ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾಗುವುದಿಲ್ಲ. ಜೊತೆಗೆ ಕ್ಷೇತ್ರದ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದೇನೆ. ಕ್ಷೇತ್ರಕ್ಕೆ ಸಾಕಷ್ಟು ಶಾಶ್ವತ ಯೋಜನೆಗಳನ್ನು ತರುತ್ತಿದ್ದು, ಇದೇ ರೀತಿ ಜನರ ಸಹಕಾರ ಅಗತ್ಯ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.



ಈ ವೇಳೆ ಡಿ.ಬಿ ಪಾಟೀಲ, ರಾಹುಲ್ ಉರನಕರ್, ವಿಠ್ಠಲ ದೇಸಾಯಿ, ಶಿವಾಜಿ ಅತವಾಡ್ಕರ್, ಪ್ರವೀಣ ಪಾಟೀಲ, ಸಂತೋಷ ಫರ್ನಾಂಡೀಸ್, ಭರಮಾ ಪಾಟೀಲ, ಕಿತ್ತೂರ್ ಮೆಡಮ್, ದೇಸಾಯಿ ಟೀಚರ್ ಮುಂತಾದವರು ಉಪಸ್ಥಿತರಿದ್ದರು.ನಂತರ ಹಿಂಡಲಗಾ ಸಮರ್ಥ ನಗರದ ಕಾಂಗ್ರೆಸ್ ಮುಖಂಡರಾದ ಪರಶುರಾಮ ಕುಡಚಿಕರ್ ಅವರ ಮನೆಯಲ್ಲಿ‌ ಸಭೆ ನಡೆಸಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

ಸಭೆಯಲ್ಲಿ ಪರಶುರಾಮ ಕುಡಚಿಕರ್, ಶಿವಾಜಿ ಸಾಲ್ಗುಡೆ, ಬಸವಂತ ಕುಂಡೇಕರ್, ಪ್ರಶಾಂತ ಜಾಧವ್, ನಾರಾಯಣ ಜಾಧವ್, ಅಶ್ವಿನಿ ಜಾಧವ್, ಗೀತಾ ಸಾಲ್ಗುಡೆ, ತಾನಾಜಿ ಕಾಂಬಳೆ ಮುಂತಾದವರು ಉಪಸ್ಥಿತರಿದ್ದರು.

ವರದಿ:- ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ