Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

Advertisement

          ಸಚಿವರ ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದ ಕಾರ್ಯಕರ್ತೆಯರು


 ಬೆಂಗಳೂರು: ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದಿದ್ದಾರೆ.




ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್ ಕೆಜಿ, ಯುಕೆಜಿ‌ ಆರಂಭಿಸುವ ಕುರಿತ ಆದೇಶ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ- ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯವರು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಗುರುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಸಚಿವರು, ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ, ಕಾರ್ಮಿಕ ಸಂಘಟನೆಗಳ ಮುಖಂಡ ಮೀನಾಕ್ಷಿ ಸುಂದರಂ ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್