Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ಅಕ್ಕಪಡೆ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Advertisement

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್‌ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಮುಂಬರುವ ಬಜೆಟ್‌ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ ವಿಸ್ತರಿಸಲಾಗುವುದು ಎಂದರು.

ಅಕ್ಕಪಡೆ ಎಂದರೆ ಮಹಿಳೆಯರಿಗೆ ಹಾಗೂ ಮಕ್ಕಳ ಪಾಲಿಗೆ ಭರವಸೆ ಇದ್ದಂತೆ. ಜಿಲ್ಲೆಯಾದ್ಯಂತ ಮಹಿಳೆಯರು, ಮಕ್ಕಳು ಸುರಕ್ಷಿತವಾಗಿರಬೇಕು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಅಕ್ಕಪಡೆಯನ್ನು ರಚಿಸಲಾಗಿದೆ ಎಂದು ಸಚಿವರು ಹೇಳಿದರು.

ಅಕ್ಕಪಡೆ ಸಿಬ್ಬಂದಿ ಸಾರ್ವಜನಿಕ ಸ್ಥಳಗಳಾದ ಮಾಲ್‌, ಜಾತ್ರಾ ಮಹೋತ್ಸವ, ಲೇಡಿಸ್‌ ಹಾಸ್ಟೆಲ್‌ಗಳು, ಕಾಲೇಜುಗಳು, ಸಮುದಾಯ ಭವನ ಸೇರಿದಂತೆ ಜನನಿಬೀಡ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ. ಅಕ್ಕಪಡೆಯ ಉದ್ದೇಶ ಸಫಲವಾಗಬೇಕು ಎಂದರೆ ನಾಗರಿಕ ಸಮಾಜ ಕೂಡ ಇದಕ್ಕೆ ಬೆಂಬಲ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ