LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ : ಪ್ರತಿಭಟನೆ ವಾಪಸ್ ಪಡೆದ ಅಂಗನವಾಡಿ ಕಾರ್ಯಕರ್ತೆಯರು

Advertisement

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದಾರೆ.


ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.


ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಸಚಿವರು ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.


ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು.


ನಾನು ಎಲ್ಲರ ಹಿತರಕ್ಷಣೆಗೆ ಬದ್ಧಳಾಗಿದ್ದೇನೆ ಎಂದು ಸಚಿವರು ತಿಳಿಸಿದರು. ಈ ವೇಳೆ‌ ಇಲಾಖೆಯ ‌ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ನಿರ್ದೇಶಕರಾದ ಮಹೇಶ್ ಬಾಬು, ಸಂಘದ ಅಧ್ಯಕ್ಷರಾದ ವರಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಶಾಂತಾ ಎಚ್.ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್. ಎಸ್.ಸುನಂದಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ