Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಗಾಟಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ

Advertisement
ಚಿಂಚೋಳಿ : ಮಾ.14 ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಸ್ಥಳೀಯ ಶಾಸಕ ಡಾ.ಅವಿನಾಶ ಜಾಧವ ಅವರೊಂದಿಗೆ ಚಿಂಚೋಳಿ ಬಳಿಯ ಪೋಲಕಪಲ್ಲಿಯಲ್ಲಿ ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷವನ ಉದ್ಘಾಟಿಸಿದರು.

ನಂತರ ಅಧಿಕಾರಿಗಳೊಂದಿಗೆ ವನದಲ್ಲಿ ಒಂದು ಸುತ್ತು ಹಾಕಿ ವಿವಿಧ ಸಸ್ಯ ರಾಶಿಗಳನ್ನು ವೀಕ್ಷಿಸಿದರು. ಲೋಟಸ್ ಎಕೋ ಪಾಂಡ್ ಬಳಿ ಪೋಟೋ ಗೆ ಪೋಸ್ ನೀಡಿದರು.ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ 2021-22ನೇ ಸಾಲಿನ ಲ್ಯಾಂಡ್ ಬಿಲ್ಡಿಂಗ್ ಯೋಜನೆ ಅಡಿಯಲ್ಲಿ 37.50 ಲಕ್ಷ‌ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಚಿಂಚೋಳಿ ಅರಣ್ಯ ವಲಯದ ಹೊಸ ವಲಯ ಅರಣ್ಯಾಧಿಕಾರಿಗಳ ಕಛೇರಿ ಕಟ್ಟಡ ಮತ್ತು 2024-25ನೇ ಸಾಲಿನ ಲಿಂಕ್ ಡಾಕುಮೆಂಟ್ ಯೋಜನೆ ಅಡಿಯಲ್ಲಿ ಚಿಂಚೋಳಿ ಸಾಮಾಜಿಕ ಅರಣ್ಯ ವಲಯದ ಹೊಸ ವಲಯ ಅರಣ್ಯ ಅಧಿಕಾರಿಗಳ ಕಛೇರಿ ಕಟ್ಟಡ ಹಾಗೂ ಉಪ ವಲಯ ಅರಣ್ಯ ಅಧಿಕಾರಿಗಳ ವಸತಿ ಗೃಹ ಕಟ್ಟಡವನ್ನು ಸಹ ಉದ್ಘಾಟಿಸಲಾಯಿತು.

ಜಾಗೃತಿ ಅಭಿಯಾನಕ್ಕೆ‌ ಚಾಲನೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗು ಕೃಷಿ ವಿಜ್ಞಾನ ಕೇಂದ್ರ ಕಲಬುರಗಿ ಸಹಯೋಗದೊಂದಿಗೆ ಕಸ್ಕುಟ (ಅಂತರವಳ್ಳಿ / ಮಂಗನ ಬಾಲ) ಕಳೆಯ ನಿರ್ವಹಣೆ ಹಾಗೂ ತೊಗರಿಯಲ್ಲಿ ಬರುವ ಗೊಡ್ಡು / ನೆಟೆ ರೋಗ ನಿರ್ವಹಣೆ ಕುರಿತು ರೈತಾಪಿ ಜನರಲ್ಲಿ ಅರಿವು ಮುಯಡಿಸಲು ಕೃಷಿ ಇಲಾಖೆಯ ಜಾಗೃತಿ ಅಭಿಯಾನಕ್ಕೆ‌ಚ
ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು. ಇದಲ್ಲದೆ‌ ಪೋಸ್ಟರ್ ಸಹ ಬಿಡುಗಡೆ ಮಾಡಲಾಯಿತು. ಕೃಷಿ ಉಪನಿರ್ದೇಶಕಿ ಅನುಸೂಯಾ ಹೂಗಾರ ಇದ್ದರು.

ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ, ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣಕುಮಾರ‌ ಪಾಟೀಲ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ ಪನ್ವಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಎಫ್ ಸುಮಿತ.ವಲಯ ಅರಣ್ಯಾಧಿಕಾರಿಗಳಾದ ಜಗನ್ನಾಥ ಕೊರಳಿ.ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಜಾಣ, ಮಾಜಿ‌ ಶಾಸಕ ಕೈಲಾಸನಾಥ ಪಾಟೀಲ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುಭಾಷ ರಾಠೋಡ, ದೀಪಕನಾಗ್ ಪುಣ್ಯಶೆಟ್ಟಿ ಸೇರಿದಂತೆ ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳು ಇದ್ದರು.

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ