ಹಾವೇರಿ : ಜವಳಿ ಸಚಿವ ರುದ್ರಪ್ಪ ಲಮಾಣಿಗೆ ಮೂರು ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಕಲ್ಲು ಕ್ವಾರಿ ಪರವಾನಿಗಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ.
ಮೂರು ಕೋಟಿ ದಂಡ ವಿಧಿಸಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಹುಣಸಿಕಟ್ಟಿ ಬಳಿ ಕಲ್ಲು ಕ್ವಾರಿ ಹೊಂದಿರುವ ಸಚಿವ ರುದ್ರಪ್ಪ ಲವಾಣಿ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕು ಹುಣಸಿಕಟ್ಟಿ ಬಳಿ ಇರುವ ಈ ಒಂದು ಕಲ್ಲು ಕ್ವಾರಿ.
ಆರು ತಿಂಗಳು ಗಡುವು ನೀಡಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನೋಟಿಸ್ ನೀಡಿದೆ. ಮೂರು ಕಂತುಗಳಲ್ಲಿ ದಂಡ ಪಾವತಿಸುವಂತೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ.
ಜಾಗ ಒತ್ತುವರಿ ಮಾಡಿ ಕಲ್ಲು ತೆಗೆದು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ. ಈ ಕುರಿತು ಡ್ರೋನ್ ಮೂಲಕ ಸಮೀಕ್ಷೆ ನಡೆಸಿತ್ತು. ಕರ್ನಾಟಕ ಸ್ಟೇಟ್ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್ (KSRSC) ಪರವಾನಗಿ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ 3 ಕೋಟಿ ದಂಡ ವಿಧಿಸಲಾಗಿದೆ ಅಲ್ಲದೆ ಹಾವೇರಿ ಜಿಲ್ಲೆಯ 60ಕ್ಕೂ ಹೆಚ್ಚು ಕಲ್ಲುಕುವಾರಿಗಳ ಮಾಲೀಕರಿಗೆ ದಂಡ ವಿಧಿಸಲಾಗಿದೆ.


