ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಸದಾಶಿವ ದೇಶಿಂಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಕಾಂಗ್ರೆಸ್ ತೊರೆದು ಸದಾಶಿವ ದೇಶಿಂಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮೂಡ, ಭೈರತಿ ಬಸವರಾಜ, ಪಿ ರಾಜು ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.


