ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಟೋಲ್ ನಾಕಾ ಬಳಿ ಹಾಗೂ ಬಸವೇಶ್ವರ ವೃತ್ತದ ಬಳಿ ಸಮಾವೇಶಗೊಂಡ ಬೆಂಬಲಿಗರು, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಬಲವರ್ಧನೆಗಾಗಿ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಬ್ಬಾಳಕರ ಉತ್ತಮ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಕಡೆಗಣಿಸಬಾರದಿತ್ತು' ಎಂದು ದೂರಿದರು.
ರಾಷ್ಟ್ರೀಯ ಹೆದ್ದಾರಿ ಹಾಗೂ ಹಿರೇಬಾಗೇವಾಡಿ-ಸವದತ್ತಿ ರಾಜ್ಯ ಹೆದ್ದಾರಿಯನ್ನು ಕೆಲಕಾಲ ತಡೆದಿದ್ದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.


