Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಗೆ ಅತ್ಯಧಿಕ ಮುನ್ನಡೆ ಖಚಿತ : ಶಾಸಕ ಮಹಾಂತೇಶ್ ಕೌಜಲಗಿ

Advertisement
ಬೈಲಹೊಂಗಲ : -ಕಾಂಗ್ರೆಸ್ ಪಕ್ಷದ ‌ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆ ಖಚಿತ ಎಂದು ಶಾಸಕ ಮಹಾಂತೇಶ್ ಕೌಜಲಗಿ ವಿಶ್ವಾಸ ವ್ಯಕ್ತಪಡಿಸಿದರು.



ಬೈಲಹೊಂಗಲ ವಿಧಾನಸಭಾ ವ್ಯಾಪ್ತಿಯ ಯಕ್ಕುಂಡಿ, ಬಡ್ಲಿ‌ ಹಾಗೂ ಬೈಲಹೊಂಗಲ ಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಶಾಸಕರು, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ ಎಂದರು.



ಕಳೆದ 10‌ ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ‌ಆಡಳಿತ‌ ನಡೆಸುತ್ತಿದ್ದು, ಬಡವರ,‌ ದೀನ ದಲಿತರ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪುತ್ತಿವೆ. ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಮತ್ತಷ್ಟು ಬಲಪಡಿಸಬೇಕು ಎಂದು‌ ಶಾಸಕರು ಕರೆ ನೀಡಿದರು.

ಇದೇ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಅತ್ಯಧಿಕ ಮತಗಳಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿ ದೆಹಲಿಗೆ ಕಳುಹಿಸೋಣ, ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಿ ಮನೆಗೆ ಕಳುಹಿಸೋಣ ಎಂದು ಕರೆ ನೀಡಿದರು.

ಭ್ರಷ್ಟ ಬಿಜೆಪಿ ಸರ್ಕಾರ, ಕೋವಿಡ್ ವೇಳೆ ಜನರ ರಕ್ತ ಹೀರಿತ್ತು. ಇದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಮಹಾಜನತೆ ಬಿಜೆಪಿಗೆ ತಕ್ಕ ಉತ್ತರ ನೀಡಿದ್ದರು. ಈ ಚುನಾವಣೆಯಲ್ಲೂ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಹೇಳಿದರು. ಕಳೆದ ಅವಧಿಯಲ್ಲಿ 40 ಪರ್ಸೆಂಟ್ ತಿಂದು ಮನೆಯಲ್ಲಿ ಕುಳಿತಿರುವ ಬಿಜೆಪಿಗರು ಸುಖಾಸುಮ್ಮನೆ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು‌ ಆರೋಪಿಸಿದರು. ಬಿಜೆಪಿ ಅವಧಿಯ ಭ್ರಷ್ಟಾಚಾರಕ್ಕೆ ನಲುಗಿ ಸಂತೋಷ ಪಾಟೀಲ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ನೊಂದು ಉದಾಹರಣೆ ಬೇಕೆ? ಎಂದು ಪ್ರಶ್ನಿಸಿದರು.

ವರದಿ:ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ