LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ ಪಾಟೀಲ್

Advertisement

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯಶವಂತರಾಯಗೌಡ ಪಾಟೀಲ್ ತಮ್ಮ ರಾಜೀನಾಮೆ ಹಿಂಪಡೆದ್ದಾರೆ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರವಾಗಿ ಮನನೊಂದಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಇದು ನಿಷ್ಠಾವಂತರು, ಪ್ರಾಮಾಣಿಕರಿಗೆ ಕಾಲವಲ್ಲ, ದೊಡ್ಡ ಷಡ್ಯಂತ್ರವೇ ನಡೆಯುತ್ತಿದೆ.ಈ ವ್ಯವಸ್ಥೆಯ ರಾಜಕಾರಣವೇ ಬೇಡ. ಮನಸ್ಸಿಗೆ ಬಹಳ ನೋವಾಗಿದೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸಿಎಂ ಡಿ.ಕೆ.ಶಿವಕುಮಾರ್, ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವು ನಾಯಕರು ರಾಜೀನಾಮೆ ಹಿಂಪಡೆಯುವಂತೆ ಯಶವಂತರಾಯಗೌಡಗೆ ಒತ್ತಾಯಿಸಿದ್ದರು.

ಆದಾಗ್ಯೂ ಒಪ್ಪದಿದ್ದಾಗ ಅಂತಿಮವಾಗಿ ಹೈಕಮಾಂಡ್ ನಾಯಕರು ಕರೆ ಮಾಡಿ ಮನವೊಲಿಸಿದ್ದಾರೆ ಎನ್ನಲಾಗಿದೆ. ಮನವೊಲಿಕೆ ಬೆನ್ನಲ್ಲೇ ಯಶವಂತರಾಯಗೌಡ ಪಾಟೀಲ್ ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST