Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ್ ವಿವಾದ : ನಾಳೆಯಿಂದ ಶಾಸಕ ಯತ್ನಾಳ್ ಅಹೋರಾತ್ರಿ ಧರಣಿ

Advertisement
ವಿಜಯಪುರ : ರಾಜ್ಯಾದ್ಯಂತ ವಕ್ಫ್ ವಿವಾದ ಭುಗಿಲೆದ್ದಿದ್ದು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ರೈತರಿಗೆ ನೋಟಿಸ್ ನೀಡಿದ್ದನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಆದರೆ ಬಿಜೆಪಿ ನಾಳೆ ಕೋಲಾರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು.

ಇತ್ತ ವಿಜಯಪುರದಲ್ಲಿ ನಾಳೆಯಿಂದ ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಆರಂಭಿಸಲಿದ್ದಾರೆ.

ಹೌದು ವಕ್ಫ್ ಆಸ್ತಿ ವಿವಾದ ಸಂಬಂಧ ನಾಳೆಯಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ.

ಅಹೋರಾತ್ರಿ ಧರಣಿಯ ಬಗ್ಗೆ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ರೈತರು, ಸಂಘ ಸಂಸ್ಥೆಗಳು, ಶಾಲೆಗಳು, ಮಠಮಾನ್ಯಗಳ ಜಮೀನು ಹಾಗೂ ಸರ್ಕಾರಿ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ.

ವಕ್ಫ್ ಆಸ್ತಿ ಎಂದು ನಮೂದಿಸಿದ್ದನ್ನು ತೆಗೆಯುವಂತೆ ಒತ್ತಾಯ ಕೇಳಿ ಬಂದಿದ್ದು, ನಾಳೆಯಿಂದ ಹೋರಾಟ ನಡೆಸುವುದಾಗಿ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೆ ನವೆಂಬರ್ ಆರರಂದು ಜೆಪಿಸಿ ಅಧ್ಯಕ್ಷರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಬಿಜೆಪಿ ಕೂಡ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್