Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ್ ವಿರುದ್ಧ ಅಹೋರಾತ್ರಿ ಧರಣಿ : 4ನೇ ದಿನಕ್ಕೆ ಕಾಲಿಟ್ಟ ಶಾಸಕ ಯತ್ನಾಳ್ ಹೋರಾಟ 

Advertisement
ವಿಜಯಪುರ : ವಕ್ಫ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಿಜಯಪುರದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 3 ದಿನ ಪೂರೈಸಿದೆ. ಪ್ರತಿಭಟನಾ ಧರಣಿ ಮುಂದುವರಿದಿದ್ದು, ಯತ್ನಾಳ್ ಪಟ್ಟು ಸಡಿಲಿಸಿಲ್ಲ.

ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿರುವುದನ್ನು ಪ್ರತಿಭಟಿಸಿ ಮತ್ತು ವಕ್ಫ್ ಹೆಸರು ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಯುತ್ತಿದ್ದು, ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ.

ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯಲ್ಲ ಎಂಬ ಸ್ಪಷ್ಟ ಸಂದೇಶ ರವಾನೆಯಾಗಿದೆ .ವಕ್ಫ್ ಹಠಾವೋ ದೇಶ್ ಬಚಾವೋ ಎಂಬ ಶೀರ್ಷಿಕೆಯಡಿ ಧರಣಿ ನಡೆಸಲಾಗುತ್ತಿದೆ. ನಮ್ಮ ಪ್ರತಿಭಟನೆ ಉದ್ದೇಶ ಕಾಂಗ್ರೆಸ್‌ ನಾಯಕರು ನುಂಗಿರುವ ಆಸ್ತಿಯ ವಾಪಸ್‌ ಪಡೆದು ರಕ್ಷಣೆ ಮಾಡುವುದಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುತ್ತಿದೆ.

ಇದನ್ನು ತಡೆಯಲು ಜಗತ್ತಿನ ಯಾವುದೇ ಶಕ್ತಿಗೂ ಸಾಧ್ಯವಿಲ್ಲ.ರೈತರ ಜಮೀನು, ಮಠಗಳು, ಸಂಘ-ಸಂಸ್ಥೆಗಳ ದಾಖಲೆಗಳಲ್ಲಿ ವಕ್ಫ್ ಎಂದು ಸೇರಿಸುತ್ತಿದ್ದಾರೆ. ಹೀಗಾಗಿ ಜನರು ಹೊರಗಡೆ ಬಂದು ಹೋರಾಟ ಮಾಡಿ ನಮ್ಮ ದೇಶ, ಧರ್ಮ, ಭೂಮಿ ರಕ್ಷಣೆ ಮಾಡಿಕೊಳ್ಳಬೇಕು.

ವಕ್ಫ್ ಆಸ್ತಿ ಒತ್ತುವರಿಯಾಗಿದ್ದನ್ನು ತೆರವು ಮಾಡಿ ಮೂಲ ಮಾಲೀಕರಿಗೆ ನೀಡಬೇಕು. ಎಲ್ಲ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಮಾಡಬೇಕು ಎಂದು ಯತ್ನಾಳ್ ಒತ್ತಾಯ ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ