Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳ ಆರಂಭಕ್ಕೆ ಶಾಸಕರಿಂದ ಚಾಲನೆ

Advertisement
ಸಿರುಗುಪ್ಪ : -ನಗರದ ತಹಶೀಲ್ದಾರ್ ಕಛೇರಿಯ ಮುಂಭಾದಲ್ಲಿರುವ 7,8ನೇ ವಿಭಾಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆಗಳ ವತಿಯಿಂದ ಅಕ್ಷರ ಅವಿಷ್ಕಾರ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 2024-25ನೇ ಸಾಲಿನಲ್ಲಿನ ಆರಂಭಗೊಳ್ಳುತ್ತಿರುವ ಎಲ್.ಕೆ.ಜಿ ಮತ್ತು ಯು.ಕೆ.ಜಿಯ ಪೂರ್ವ ಪ್ರಾಥಮಿಕ ತರಗತಿಗಳ ಕೊಠಡಿಯನ್ನು ಶಾಸಕ ಬಿ.ಎಮ್.ನಾಗರಾಜ ಅವರು ಉದ್ಘಾಟಿಸಿದರು.



ನಂತರ ಮಾತನಾಡಿ ರಾಜ್ಯದಲ್ಲಿ ಸಾಕ್ಷರತೆಯ ಪ್ರಮಾಣದಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕದ ಭಾಗದ ಶಾಲೆಯ ಮಕ್ಕಳಿಗೆ ಪೂರ್ವ ಪ್ರಾಥಮಿಕವಾಗಿ ಎಲ್.ಕೆ.ಜಿ ಮತು ಯು.ಕೆ.ಜಿ ತರಗತಿಗಳಲ್ಲಿ ಇಂಗ್ಲೀಷ್ ಭಾಷೆ ಕಲಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಮಹತ್ತರ ಯೋಜನೆಯನ್ನು ಜಾರಿಗೆ ತಂದಿದೆ.ತಾಲೂಕಿನಲ್ಲಿ ಅಕ್ಷರ ಅವಿಷ್ಕಾರ ಯೋಜನೆಯಡಿ 32 ಶಾಲೆಗಳಲ್ಲಿ ಕಟ್ಟಡ, ಸಿಬ್ಬಂದಿಗಳು ಮತ್ತು ಆಯಾಗಳ ವ್ಯವಸ್ಥೆಯೊಂದಿಗೆ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲೂ ಹೆಚ್ಚಿನ ಅಭಿವೃದ್ದಿಗೆ ಹೊತ್ತು ಕೊಡಲಾಗುವುದು ಎಂದು ತಿಳಿಸಿದರು.



ಶಾಲೆಗೆ ಅಗತ್ಯವಿರುವ ನೀರು, ಸ್ವಚ್ಛತೆ, ಮತ್ತು ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಸಂಬಂದಿಸಿದ ಜನಪ್ರತಿನಿಧಿಗಳಿಗೆ ಸೂಚಿಸಿದರು.



ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್, ತಾಲೂಕು ಪ್ರಭಾರಿ ದೈಹಿಕ ಶಿಕ್ಷಣಾಧಿಕಾರಿ ರಮೇಶ, ಕರ್ನಾಟಕ ರಾಜ್ಯ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಈರಣ್ಣ, ನಿವೃತ್ತ ಶಿಕ್ಷಣ ಸಂಯೋಜಕ ಬಸವರಾಜಯ್ಯ, ಪ್ರಸ್ತುತ ಇ.ಸಿ.ಓಗಳಾದ ರಫೀಕ್, ಹನುಮನಗೌಡ, ಬಿ.ಆರ್.ಪಿಗಳಾದ ಕಾಳಿಂಗಪ್ಪ, ವೀರೇಶ, ಗಜೇಂದ್ರ, ರುದ್ರವೇಣ , ಸಿ.ಆರ್.ಪಿ. ಮಂಜುನಾಥ ಅಂಗಡಿ, ಶಾಲಾ ಅಭಿವೃದ್ದಿ ಮಂಡಳಿ ಅಧ್ಯಕ್ಷ ಲಕ್ಷ್ಮಣ, ಮುಖ್ಯಗುರು ಸದಾಶಿವ.ಎನ್.ಬನ್ಸೋಡೆ, ಬಗರ್ ಹುಕ್ಕುಂ ಸದಸ್ಯ ಪವನ್ ದೇಸಾಯಿ, ಮುಖಂಡರಾದ ಮೋಹಿನುದ್ದೀನ್ ಖಾದ್ರಿ, ವೆಂಕಟೇಶ, ಗೊರವರ ಶ್ರೀನಿವಾಸ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ವರದಿ :-ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ