LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾನ್ವಿಯ ಸ್ವಾತಂತ್ರ‍್ಯ ಹೋರಾಟಗಾರರ ಕೃತಿ ಲೋಕಾರ್ಪಣೆಗೊಳಿಸಿದ ಶಾಸಕರು

Advertisement

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ .ವಿಜಯ ರಾವ್ ಕುಪನೇಶಿ ರವರು ರಚಿಸಿದ ಮಾನ್ವಿಯ ಸ್ವಾತಂತ್ರ‍್ಯ ಹೋರಾಟಗಾರರು ಕೃತಿಯನ್ನು ಶಾಸಕ ಹಂಪಯ್ಯನಾಯಕ ಲೋಕರ್ಪಣೆಗೊಳಿಸಿ ಮಾತನಾಡಿ ಮಾನ್ವಿ ತಾಲೂಕಿನಲ್ಲಿನ ಅನೇಕ ದೇಶಭಕ್ತರು ಮಹಾನಿಯರು ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ನಂತರ ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೈದ್ರಾಬಾದ್ ನಿಜಾಮರ ಆಡಳಿತದ ವಿರುದ್ದ ಹೋರಾಟ ಮಾಡಿದ್ದಾರೆ ನಿವೃತ್ತ ಪ್ರಾಚಾರ್ಯರಾದ ಡಾ .ವಿಜಯ ರಾವ್ ಕುಪನೇಶಿ ರವರು ಮಾನ್ವಿ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ಸಂಪೂರ್ಣವಾದ ಮಾಹಿತಿಯನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ನಮ್ಮ ಮಾನ್ವಿ ತಾಲೂಕಿನ ಇತಿಹಾಸವನ್ನು ತಿಳಿಸುವ ಕಾರ್ಯವನ್ನು ಮಾಡಿರುವುದು ಉತ್ತಮ ಕಾರ್ಯವಾಗಿದೆ ಎಂದು ತಿಳಿಸಿದರು.
 ಡಾ .ವಿಜಯ ರಾವ್ ಕುಪನೇಶಿ ಮಾನ್ವಿಯ ಸ್ವಾತಂತ್ರ‍್ಯ ಹೋರಾಟಗಾರರು ಕೃತಿಯ ಬಗ್ಗೆ ಮಾತನಾಡಿದರು.
ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ನಯೋಪ್ರ ಅಧ್ಯಕ್ಷರಾದ ಅಬ್ದುಲ್ ಗಾಫುರ್ ಸಬ್, ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಬಿ.ಕೆ .ಅಮರೇಶಪ್ಪ ವಕೀಲರು, ,ಪಿ .ಐ.ಸೋಮಶೇಖರ್ ಎಸ್. ಕೆಂಚರೆಡ್ಡಿ,  ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಸೇರಿದಂತೆ ಇನ್ನಿತರರು ಇದ್ದರು. 
ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST