LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈ ಭಾರಿ ಮಾದರಿ ಬೆಳಗಾವಿಯಲ್ಲಿ ಮಾದರಿ ರಾಜ್ಯೋತ್ಸವ : ಡಿಸಿ ಮೊಹಮ್ಮದ್ ರೋಷನ್

Advertisement

ಬೆಳಗಾವಿ : ಪ್ರತಿ ವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ವಿಜೃಂಭಣೆ ಹಾಗೂ ಮಾದರಿ ರಾಜ್ಯೋತ್ಸವ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು. ರಾಜ್ಯೋತ್ಸವದ ಹಿನ್ನಲೆಯಲ್ಲಿ ಬೆಳಗಾವಿ ನಗರದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ ಮಹಾನಗರ ಪಾಲಿಕೆಯಿಂದ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಠರಾವು ಅಂಗೀಕರಿಸಿದ್ದು ಐತಿಹಾಸಿಕ ಕಾರ್ಯವಾಗಿದೆ. ಈ ಕಾರ್ಯಕ್ಕೆ ಹೋರಾಡಿದ ಕನ್ನಡಪರ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸಿದರು. ಸಂಪೂರ್ಣ ಮಹಾಜನ್ ವರದಿಯನ್ನು ಅಳವಡಿಸಿಕೊಂಡು ಅಂಗೀಕಾರವಾದ ಈ ಠರಾವು ಮುಂದಿನ ಕಾನೂನು ಹೋರಾಟಕ್ಕೆ ತುಂಬಾ ಉಪಯುಕ್ತವಾಗಲಿದೆ ಎಂದರು.

ರಾಜ್ಯೋತ್ಸವ ದಿನದಂದು ನಗರದಲ್ಲಿ ಲಕ್ಷಾಂತರ ಜನ ಸೇರುವುದರಿಂದ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.

ರಾಜ್ಯೋತ್ಸವದ ಹಿನ್ನಲೆಯಲ್ಲಿ ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಕನ್ನಡಪರ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಕನ್ನಡ ಪರ ಹೋರಾಟಗಾರರು ಹಾಗೂ ಸಾಧಕರಿಗೆ ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು.

ಪ್ರತಿ ವರ್ಷ ಬೆಳಗಾವಿ ರಾಜ್ಯೋತ್ಸವಕ್ಕೆ ಆಗಮಿಸುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಬೆಳಗಾವಿಯ ರಾಜ್ಯೋತ್ಸವದ ಮೆರವಣಿಗೆಗೆ ಹೆಚ್ಚಿನ ಮೆರಗು ನೀಡಲು ಹಾಗೂ ಸಾರ್ವಜನಿಕರಿಗೆ ಕುಳಿತು ವೀಕ್ಷಿಸಲು ಅನುಕೂಲವಾಗುವ ಉದ್ದೇಶದೊಂದಿಗೆ ಈ ಬಾರಿ ಮೆರವಣಿಗೆಯ ಮಾರ್ಗ ಬದಲಾವಣೆ ಮಾಡಲು ಚಿಂತಿಸಲಾಗಿದ್ದು, ಈ ಕುರಿತು ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಣಯಿಸಲಾಗುವುದು.

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಣೆ ಮಾಡಿ ಜಿ.ಪಿ.ಎಸ್. ಆಧಾರಿತ ಛಾಯಾಚಿತ್ರಗಳೊಂದಿಗೆ ಕಾರ್ಯಕ್ರಮದ ವರದಿ ಸಲ್ಲಿಸಲು ಹಾಗೂ ಸದಲಗಾದಲ್ಲಿನ ಕುವೆಂಪು ಮಾದರಿ ಶಾಲೆಯ ಸ್ಥಿತಿಗತಿಯ ವರದಿ ಸಲ್ಲಿಸಲು ಸೂಚಿಸಿದರು.

ನ.1 ರಂದು ಜರುಗಲಿರುವ ರಾಜ್ಯೊತ್ಸವದ ಭವ್ಯ ಮೆರವಣಿಗೆ ಮಾರ್ಗದುದ್ದಕ್ಕೂ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಅಳವಡಿಸುವುದರ ಜೊತೆಗೆ ರೂಪಕಗಳಿಗೆ ಪ್ರಶಸ್ತಿ ನೀಡಲಾಗುವುದು. ಬೆಳಗಾವಿಯ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಜನರಿಗೆ ಅನುವು ಮಾಡಿಕೊಡುವಂತೆ ಹೆಚ್ಚಿನ ಸ್ಥಳಾವಕಾಶ ಒದಗಿಸಬೇಕು ಹಾಗೂ ಸುವರ್ಣ ವಿಧಾನಸೌಧದ ಎದುರಿಗೆ 108 ಅಡಿಯ ಭುವನೇಶ್ವರಿ ದೇವಿಯ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಲ್ಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಕರಾಳ ದಿನಾಚರಣೆಗೆ ವಿರೋಧ:

ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಮನವಿಗೆ ಸ್ಪಂಧಿಸಿದ ಜಿಲ್ಲಾಧಿಕಾರಿಗಳು ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ  ಎಂದು ಸಭೆಗೆ ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ