Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಮತ್ತು ಅಮಿತ್ ಶಾ ಅವರು ನರಕಕ್ಕೆ ಹೋಗಲಿದ್ದಾರೆ: ಖರ್ಗೆ ವಿವಾದಾತ್ಮಕ ಹೇಳಿಕೆ 

Advertisement
ನವದೆಹಲಿ : ನದಿಯಲ್ಲಿ ಪುಣ್ಯಸ್ನಾನ ಮಾಡಿದರೆ ಪಾಪಗಳು ಕಳೆದು ಹೋಗಲ್ಲ.. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ನರಕಕ್ಕೆ ಹೋಗಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಪ್ರಯುಕ್ತ ಪ್ರಯಾಗ್​​​ರಾಜ್​​ನಲ್ಲಿ ಇಂದು ಶಾ ಅವರು ನದಿಯಲ್ಲಿ ಪವಿತ್ರಾ ಸ್ನಾನ ಮಾಡಿದರು.

ಈ ಕುರಿತು ವ್ಯಂಗ್ಯವಾಗಿ ಟೀಕಿಸಿದ ಖರ್ಗೆ ಅವರು, ಸ್ನಾನ ಮಾಡಿದ ತಕ್ಷಣ ಮಾಡಿದ ಪಾಪಗಳು ತೊಳೆದು ಹೋಗಲ್ಲ. ಪಾಪಗಳಿಗೆ ಪರಿಹಾರವೂ ಸಿಗಲ್ಲ.. ಜನರ ಶಾಪದಿಂದ ಅವರು ಸೀದಾ ನರಕಕ್ಕೆ ಹೋಗಲಿದ್ದಾರೆ ಎಂದು ಖರ್ಗೆ ಅವರ ಹೇಳಿಕೆಯು ಇದೀಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಶಾ ಅವರು ತ್ರಿವೇಣಿ ಸಂಗಮದಲ್ಲಿ ಹಲವು ಹಿಂದೂ ಸಂತರು, ಸಾಧುಗಳೊಂದಿಗೆ ಪವಿತ್ರ ಸ್ನಾನ ಮಾಡಿ ದೇವರಿಗೆ ವಿವೇಶ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮುನ್ನ ಅರಲಿ ಘಾಟ್ ತಲುಪಲು ದೋಣಿ ಸವಾರಿ ಮಾಡಿದರು.

ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಶಾ ಅವರಿಗೆ ಸಾತ್ ನೀಡಿದರು. ಇತ್ತೀಚೆಗೆ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​​​ ಸೇರಿದಂತೆ, ರಾಜ್ಯದ ಹಿರಿಯ ಮುಖಂಡರೂ ಆಗಿರುವ ಕೇಂದ್ರದ ಮಂತ್ರಿ ವಿ.ಸೋಮಣ್ಣ ದಂಪತಿಯೂ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ