Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿಯಾಗಿ 12 ವರ್ಷ ಪೂರೈಸಿದ ಮೋದಿ : ಬಿಜೆಪಿ ನಾಯಕರಿಂದ ವಿವಿಧೆಡೆ ವಿಶೇಷ ಪೂಜೆ

Advertisement

ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ರಾಜ್ಯ ಬಿಜೆಪಿ ನಾಯಕರು ನಗರದ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಅಂತೆಯೇ ರಾಜ್ಯದ ವಿವಿಧೆಡೆ ದೇವಾಲಯಗಳಲ್ಲಿ ಬಿಜೆಪಿ ನಾಯಕರು, ಚುನಾಯಿತ ಪ್ರತಿನಿಧಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಗುವುದು.ಮಲ್ಲೇಶ್ವರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ, ಸಹ ಉಸ್ತುವಾರಿ ಸುಧಾಕರ ರೆಡ್ಡಿ ಮಲ್ಲೇಶ್ವರದಲ್ಲಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬನಶಂಕರಿ ದೇವಾಲಯದಲ್ಲಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಶಾಂತಿನಗರ ಕೆಂಪಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಶಿವಮೊಗ್ಗದಲ್ಲಿ ವಿಶೇಷ ಪೂಜೆ

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 12 ವರ್ಷ ಪೂರೈಸಿದ ಶುಭ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ವಿನೋಬನಗರದ ಶ್ರೀ ಅಬಿಷ್ಟವರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿರುತ್ತಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST