Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಗಾರು ಪೂರ್ವ ಮಳೆ ಅಬ್ಬರ : ನಿನ್ನೆ ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿ

Advertisement
ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ನಿನ್ನೆ ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿಯಾಗಿದ್ದಾರೆ.

ಬಳ್ಳಾರಿ, ವಿಜಯಪುರ ಹಾಗೂ ಹಾವೇರಿಯ ತಲಾ ಇಬ್ಬರು, ರಾಯಚೂರು, ಕೊಪ್ಪಳ, ಚಿಕ್ಕಮಗಳೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ.


ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ.


ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.


ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (14) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಭಾರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.


ವಿಜಯಪುರ


ಇನ್ನು ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಡಿಲು ಬಡಿದು ಮಲ್ಲಪ್ಪ ತಾಳಿಕೋಟೆ (47) ಸಾವನಪ್ಪಿದ್ದಾರೆ.


ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮಲ್ಲಪ್ಪ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಚಿಕ್ಕಮಗಳೂರು


ಅದೇ ರೀತಿಯಾಗಿ ಗೆದ್ಲೇಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲಹಳ್ಳಿ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸಿಡಿಲು ಬಡಿದು ಕುರಿಗಾಹಿ ಲೊಕೇಶಪ್ಪ (65) ಸಾವನಪ್ಪಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.


ಹಾವೇರಿ, ಗದಗದಲ್ಲೂ ಮೂವರು ಸಾವು


ಅಲ್ಲದೇ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಕೂಡ ಸಿಡಿಲು ಬಡಿದು ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿಯ ನಾಗಪ್ಪ ಬಸವಣೆಪ್ಪ ಕಣಸೋಗಿ (65), ರಟ್ಟೀಹಳ್ಳಿ ತಾಲ್ಲೂಕಿನ ಕುಡುಪಲಿ ಸುನೀಲ್ ಕಾಳೇರ (29) ಹಾಗೂ ಗದಗ ಜಿಲ್ಲೆಯ ಬಸಾಪುರದ ಮರಿಯವ್ವ ನಾಯ್ಕರ್ (60) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ