Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಮುಂಗಾರು ಅಧಿವೇಶನ : ಕೇಂದ್ರದ ವಿರುದ್ಧ ಪ್ರತಿಪಕ್ಷಗಳಿಂದ ಚಾಟಿಗೆ ಸಿದ್ಧತೆ

Advertisement

ನವದೆಹಲಿ: ದೇಶದ ಗಮನ ಸೆಳೆದಿರುವ ಸಂಸತ್ತಿನ ಮುಂಗಾರು ಅಧಿವೇಶನವು (Monsoon session) ಇಂದಿನಿಂದ ಅಧಿಕೃತವಾಗಿ ಆರಂಭವಾಗುತ್ತಿದ್ದು, ಆಗಸ್ಟ್ 13 ರವರೆಗೆ ನಡೆಯಲಿದೆ.

 ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಹಲವು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸಜ್ಜಾಗಿದ್ದರೆ, ಇನ್ನೊಂದೆಡೆ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ರಾಮ ಮಂದಿರ (Ramamandir) ದೇಣಿಗೆ ಹಗರಣ, ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ(NEET ), ಇ 20 ಪೆಟ್ರೋಲ್‌ (E20 petrol) ಮುಂತಾದ ಪ್ರಮುಖ ಅಸ್ತ್ರಗಳೊಂದಿಗೆ ಸಿದ್ಧವಾಗಿವೆ.

ಇದರಿಂದಾಗಿ ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಭಾರಿ ರಾಜಕೀಯ ಜಟಾಪಟಿ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯಲ್ಲಿ ಒಟ್ಟು 40 ರಾಜಕೀಯ ಪಕ್ಷಗಳ 58 ನಾಯಕರು ಪಾಲ್ಗೊಂಡಿದ್ದರು. ದೇಶದ ಅಭಿವೃದ್ಧಿಗಾಗಿ ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಲ್ಲಿ ವಿನಂತಿಸಿದೆ. 

ಪ್ರತಿಭಟನೆ ಮಾಡುವುದರಿಂದ ಯಾರಿಗೂ ರಾಜಕೀಯ ಲಾಭವಾಗುವುದಿಲ್ಲ, ಬದಲಿಗೆ ದೇಶದ ಜನರು ಸಂಸತ್ತು ಸರಿಯಾಗಿ ನಡೆಯಬೇಕೆಂದು ಬಯಸುತ್ತಾರೆ.

ಹೀಗಾಗಿ ಎಲ್ಲ ಪಕ್ಷಗಳು ಸಕಾರಾತ್ಮಕ ಚರ್ಚೆಗಳಲ್ಲಿ ಭಾಗವಹಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮನವಿ ಮಾಡಿದ್ದಾರೆ. ಸರ್ಕಾರವು ಈ ಅಧಿವೇಶನದಲ್ಲಿ ಚರ್ಚೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಿದೆ.

ಈ ಬಾರಿಯ ಅಧಿವೇಶನದಲ್ಲಿ ಕ್ಷೇತ್ರ ಪುನರ್ ವಿಂಗಡಣೆ (ಡಿಲಿಮಿಟೇಷನ್) ಮಸೂದೆ ಜಾರಿಯಾಗಲಿದೆಯೇ ಎಂಬುದು ತೀವ್ರ ಕುತೂಹಲ ಮೂಡಿಸಿದೆ. 

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಹಾಗೂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಗಳಲ್ಲಿ ಉಂಟಾಗಿರುವ ರಾಜಕೀಯ ಸೀಳಿನಿಂದಾಗಿ ಎನ್‌ಡಿಎ ಮೈತ್ರಿಕೂಟದ ಬಲ ಹೆಚ್ಚಾಗಿದೆ. 

ಈ ಹಿನ್ನೆಲೆಯಲ್ಲಿ ಸರ್ಕಾರ ಮಸೂದೆಯನ್ನು ಮಂಡಿಸಬಹುದು ಎಂಬ ವದಂತಿಗಳಿವೆ. ಆದರೆ, ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಧಕ್ಕೆಯಾಗಬಹುದು ಎಂದು ವಿರೋಧ ಪಕ್ಷಗಳು ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿವೆ. 

ಸಚಿವ ಕಿರಣ್ ರಿಜಿಜು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾವುದೇ ಹೆಚ್ಚುವರಿ ಮಸೂದೆಗಳನ್ನು ತರುವ ಮುನ್ನ ಉಭಯ ಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಯಲ್ಲಿ ಚರ್ಚಿಸಿ, ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST