Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ 

Advertisement
ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿದ್ದಮ್ಮ(30), ಆರ್ಯ(4), ಅವನಿ(6), ಅಭಿಜ್ಞಾ(8) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮೂವರು ಮಕ್ಕಳನ್ನು ಕೃಷಿಹೊಂಡಕ್ಕೆ ತಳ್ಳಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ಮೂಲದ ಸಿದ್ದಮ್ಮ ಪತಿಯ ಜೊತೆಗೆ ಕುರಿ ಮೇಯಿಸಲು ಬಂದಿದ್ದರು. ಬರದನಹಳ್ಳಿಯ ರಾಘವೇಂದ್ರ ಎಂಬುವವರ ಜಮೀನಿನಲ್ಲಿ ಕುರಿ ಮಂದೆ ಹಾಕಿದ್ದರು. ಪತಿ ಕುಮಾರ್ ಜೊತೆಗೆ ನಿನ್ನೆ ಪತ್ನಿ ಸಿದ್ದಮ್ಮ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಗಲಾಟೆಯ ನಂತರ ಮೂವರು ಮಕ್ಕಳ ಜೊತೆಗೆ ಸಿದ್ದಮ್ಮ ಕುರಿ ಮೇಯಿಸಲು ತೆರಳಿದ್ದಾರೆ. ಕುರಿ ಮೇಯಿಸಲು ಹೋದಾಗಲೇ ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿದ್ದಾರೆ.

ಸಂಜೆಯಾದರೂ ಕುರಿಗಳು, ಪತ್ನಿ, ಮಕ್ಕಳು ಹಿಂತಿರುಗದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗಿದೆ. ಕೃಷಿ ಹೊಂಡದ ಬಳಿಯೇ ಕುರಿಗಳು ನಿಂತಿದ್ದರಿಂದ ಅನುಮಾನಗೊಂಡು ಕೃಷಿಹೊಂಡದಲ್ಲಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಗಾಬರಿಯಾದ ಪತಿ ಕುಮಾರ್ ತಮ್ಮ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ