LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಐವಿಎಫ್ ಮೂಲಕ ಜನ್ಮ ನೀಡಿದ ಅವಳಿ ಶಿಶು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

Advertisement

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿ ತನ್ನ ನಾಲ್ಕು ತಿಂಗಳ ಅವಳಿ ಹೆಣ್ಣು ಶಿಶುಗಳನ್ನು ನೀರಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ವಾಜರಹಳ್ಳಿಯ ಬಿಸಿಸಿಎಚ್‌ಎಸ್ ಲೇಔಟ್ ನಿವಾಸಿ ರಾಮಲಿಂಗಪ್ಪ ದಂಪತಿ ಮಕ್ಕಳು ಕೊಲೆಯಾಗಿದ್ದಾರೆ.ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅವರ ಪತ್ನಿ ಉಮಾದೇವಿ ಅವರನ್ನು ರಕ್ಷಿಸಿ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮನೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ಉಮಾದೇವಿಗೆ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ರಾಮಲಿಂಗಪ್ಪ ಅವರಿಗೆ ಹತ್ತು ವರ್ಷಗಳ ಹಿಂದೆ ಉಮಾದೇವಿ ಜೊತೆಗೆ ಮದುವೆಯಾಗಿದ್ದು, ಮದುವೆ ನಂತರ ದಂಪತಿಗೆ ಸಂತಾನವಾಗಿರಲಿಲ್ಲ. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಐವಿಎಫ್ ಮೂಲಕ ಇಬ್ಬರು ಹೆಣ್ಣುಮಕ್ಕಳಿಗೆ ಉಮಾದೇವಿ ಜನ್ಮ ನೀಡಿದ್ದರು.

ಹೆರಿಗೆ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮಕ್ಕಳ ಬಗ್ಗೆ ನಿರಾಸಕ್ತಿ ತೋರಿಸುತ್ತಿದ್ದರು. ಅಸಹಜವಾಗಿ ವರ್ತಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳವಾರ ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ತಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ