ಉತ್ತರಾಖಂಡ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಾಯಿಯ ಪ್ರೀತಿ, ಆಶೀರ್ವಾದ ಮತ್ತು ವಾತ್ಸಲ್ಯ ಜೀವನದ ಅತ್ಯಂತ ಅಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟ ಎಂದು ದುಃಖ ಹಂಚಿಕೊಂಡಿದ್ದಾರೆ.
ಅಲ್ಲದೆ, ಭಗವಾನ್ ಕೇದಾರನಾಥನಲ್ಲಿ ಪ್ರಾರ್ಥನೆ ಸಲ್ಲಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಯೋಗಿ ಆದಿತ್ಯನಾಥ್ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಧಾಮಿ ಹಾರೈಸಿದ್ದಾರೆ.


