ಈ ಸಂದರ್ಭದಲ್ಲಿ ಸಂಸದರು ಸವಿ ನೆನಪಿಗಾಗಿ ಹುಬ್ಬಳ್ಳಿ ಸಾಹಿತ್ಯ ಭಂಡಾರ ಪ್ರಕಟ ಮಾಡಿದ " Temple treasures a journey through time " ಯ ಪುಸ್ತಕವನ್ನು ನೀಡಿದರು.

ಈ ಸಮಯದಲ್ಲಿ ಸಂಸದರು ಸವದತ್ತಿಯ ಶ್ರೀ ಕ್ಷೇತ್ರ ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಕ್ಕೆ ನರೇಂದ್ರ ಮೋದಿಜಿಯವರಿಗೆ ಧನ್ಯವಾದಗಳನ್ನು ತಿಳಿಸಿ, ಅದೇ ರೀತಿಯಲ್ಲಿ ರಾಮದುರ್ಗದಲ್ಲಿರುವ ಐತಿಹಾಸಿಕ ಶಬರಿ ಕೊಳ್ಳವನ್ನು ಸಹ ಅಭಿವೃದ್ಧಿಪಡಿಸುವಂತೆ ವಿನಂತಿಸಿದರು.
ಹಾಗೂ ಬೆಂಗಳೂರು - ಧಾರವಾಡದ ನಡುವೆ ಸದ್ಯ ಸಂಚರಿಸುತ್ತಿರುವ "ವಂದೇ ಭಾರತ" ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೆ ವಿಸ್ತರಿಸಿ ಬೆಳಗಾವಿ ಜಿಲ್ಲಾ ನಿವಾಸಿಗಳ ಅನೇಕ ದಿನಗಳ ಬೇಡಿಕೆಯನ್ನು ಪರಿಗಣಿಸುವಂತೆ ವಿನಂತಿಸಿ, ಮನವಿಯನ್ನು ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳಿಗೆ ನೀಡಿದರು. ಮುಂದುವರೆದು ವಿಮಾನಯಾನ ಸೇವೆಗೆ ಸಂಬಂಧಿಸಿದಂತೆ "ಉಡಾನ್ 3.0" ಯೋಜನೆಯ ಅವಧಿಯನ್ನು ಇನ್ನೂ ಹೆಚ್ಚಿಸಿದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮತ್ತು ಬೆಳಗಾವಿ ನಗರ ಹಾಗೂ ಟು ಟಯರ್ ಸಿಟಿಗಳ ವಿಮಾನಯಾನ ಸೇವೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಪ್ರಧಾನಮಂತ್ರಿಯವರಲ್ಲಿ ವಿನಂತಿಸಿದರು.ಬೇಡಿಕೆಯನ್ನು ಅವಲೋಕಿಸಿದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇದನ್ನು ಈಡೇರಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವರಿಗೆ ಅವಶ್ಯ ಸೂಚಿಸುವ ಕುರಿತು ಭರವಸೆಯನ್ನು ನೀಡಿರುವುದಾಗಿ ಮತ್ತು ಸಂಸದರಾದ ಜಗದೀಶ ಶೆಟ್ಟರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಪ್ರತೀಕ ಚಿಟಗಿ

