ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಆಂಜನೇಯ ದೇವಸ್ಥಾನ, ಎಸ್.ಪಿ.ಎಂ ರಸ್ತೆಯ ಕಪಿಲೇಶ್ವರ ದೇವಸ್ಥಾನ, ವಡಗಾಂವ ಮಂಗಾಯಿ ದೇವಸ್ಥಾನ, ವಡಗಾಂವ ಬವಶಂಕರಿ ದೇವಸ್ಥಾನ, ಖಾಸಭಾಗ ವಡ್ಡರ ಚಾವನಿಯ ದುರ್ಗಾದೇವಿ ದೇವಸ್ಥಾನಕ್ಕೆ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಜಾರಕಿಹೊಳಿ ಇವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದ ಸನ್ಮಾನವನ್ನು ಸ್ವೀಕರಿಸಿದರು ಇದೇ ಸಮಯದಲ್ಲಿ ಯುವ ನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ :ರಾಜು ಮುಂಡೆ

