
ರಾಜ್ಯಪಾಲರ ಕಚೇರಿಯನ್ನು ರಾಜಕೀಯ ದುರದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಪಕ್ಷ ಸಂವಿಧಾನದ ವಿರುದ್ಧ ನಡೆದುಕೊಳ್ಳುತ್ತಿದೆ. ರಾಜ್ಯಪಾಲರು ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೂಲಕ ವಿರೋಧ ಪಕ್ಷದ ಆಡಳಿತದ ರಾಜ್ಯ ಸರ್ಕಾರಗಳನ್ನು ಜೆಪಿ,ಅಸ್ಥಿರಗೊಳಿಸುತ್ತಿರುವುದು ಈಗಾಗಲೇ ಜನರಿಗೆ ತಿಳಿದಿದೆ. ಸಿದ್ದರಾಮಯ್ಯ ಪರ ಇಡೀ ಇಂಡಿಯಾ ಮೈತ್ರಿ ಕೂಟ ನಿಲ್ಲಲಿದೆ.

ಕಾನೂನಾತ್ಮಕ ಹೋರಾಟಕ್ಕೆ ನಾವು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ದೇಶದ ಮೂಲೆ ಮೂಲೆಗಳಲ್ಲಿ ಬಿಜೆಪಿಯ ಸರ್ವಾಧಿಕಾರಿ ಧೋರಣೆಯನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಹೇಳಿದರು.
ವರದಿ ಶಾಂತಿನಾಥ್ ಜಿ ಮಗದುಮ್

