Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಯುವ ನಾಯಕ ಮೃಣಾಲ್ ಹೆಬ್ಬಾಳಕರ್

Advertisement
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಗೋಕಾಕ್ ನಗರದ ಲೋಳಸರ್ ಬ್ರಿಡ್ಜ್ ಹಾಗೂ ನಗರದೊಳಗೆ ನೀರು ಆವರಿಸಿರುವ ಸ್ಥಳಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಮೃಣಾಲ್ ಮಾಹಿತಿ ಪಡೆದರು.



ಮಳೆಯಿಂದ ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದ ಮೃಣಾಲ್ ಹೆಬ್ಬಾಳಕರ್, ಸಂಕಷ್ಟದಲ್ಲಿರುವ ಜನರಿಗೆ ಧೈರ್ಯ ತುಂಬಿದರು. ಮನೆಮಠ ಕಳೆದುಕೊಂಡಿರುವ ಸಂತ್ರಸ್ಥರು ಮೃಣಾಲ್ ಹೆಬ್ಬಾಳಕರ್ ಅವರ ಬಳಿ ಅಳಲು ತೋಡಿಕೊಂಡರು. ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ಎಲ್ಲಾ ರೀತಿಯಲ್ಲೂ ನೆರವು ನೀಡುತ್ತಿದ್ದು, ಮಳೆ ನಿಂತ ಬಳಿಕ ಮತ್ತಷ್ಟು ಪರಿಹಾರ ಒದಗಿಸುವ ಭರವಸೆ ನೀಡಿದರು.



ಆರೋಗ್ಯದ ಕಾಳಜಿ ವಹಿಸುವಂತೆ ಸಂತ್ರಸ್ಥರಿಗೆ ಮನವಿ ಮಾಡಿದ ಮೃಣಾಲ್ ಹೆಬ್ಬಾಳಕರ್, ಮಕ್ಕಳೊಂದಿಗೆ ಕೆಲಕಾಲ ಬೆರತು ಭರವಸೆ ತುಂಬಿದರು. "ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ಎಲ್ಲಾ ರೀತಿಯಲ್ಲೂ ನೆರವು ನೀಡುತ್ತಿದ್ದು, ಜನರು ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸಬೇಕು' ಎಂದು ಮೃಣಾಲ್ ಹೆಬ್ಬಾಳಕರ್ ಮನವಿ ಮಾಡಿದರು.



ಈ ವೇಳೆ ಗೋಕಾಕ್ ಕಾಂಗ್ರೆಸ್ ಮುಖಂಡ ಡಾ.ಮಹಾಂತೇಶ್ ಕಡಾಡಿ, ಚಂದ್ರಶೇಖರ ಕೊಣ್ಣೂರ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ: ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ