Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಕನಸಿನ ಬೆಳಗಾವಿ ನಿರ್ಮಾಣಕ್ಕೆ ಬೆಂಬಲಿಸಿ : ಮೃಣಾಲ ಹೆಬ್ಬಾಳಕರ್ ಮನವಿ

Advertisement
ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೂರೊಂದು ಕನಸು ಕಟ್ಟಿಕೊಂಡಿದ್ದೇನೆ. ಜಿಲ್ಲೆಯ ಬಗ್ಗೆ ದೂರದೃಷ್ಟಿ ಹೊಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ನನ್ನ ತಾಯಿ ಹಾಗೂ ಸಚಿವರು ಆದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ತಜ್ಞರ ಮಾರ್ಗದರ್ಶನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.
ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಈ ಚುನಾವಣೆ ಜಿಲ್ಲೆಯ ಅಸ್ಮಿತೆ ಹಾಗೂ ಸ್ವಾಭಿಮಾನದ ವಿಷಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಹೆಚ್ಚು ಅನುದಾನ ತರಲು ಅನುಕೂಲ ಆಗಲಿದೆ. ನಮ್ಮ ಜಿಲ್ಲೆ ಕರ್ನಾಟಕದ ಎರಡನೇ ರಾಜಧಾನಿ ಎನಿಸಿಕೊಂಡರೂ ನಾವು ನಿರೀಕ್ಷಿಸಿದಷ್ಟು ಅಭಿವೃದ್ಧಿಯಾಗಿಲ್ಲ. ಜಿಲ್ಲೆಗೆ ಆಗಬೇಕಿರುವ ಕೆಲಸಗಳ ಕುರಿತು ನನಗೆ ಅರಿವಿದ್ದು, ಅಭಿವೃದ್ಧಿಯೇ ನನ್ನ ಮಂತ್ರವಾಗಲಿದೆ ಎಂದು ಮೃಣಾಲ್‌ ಹೆಬ್ಬಾಳಕರ್ ತಿಳಿಸಿದ್ದಾರೆ.



ಕೇಂದ್ರದಲ್ಲಿ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುವ ಹಂಬಲ ಹೊಂದಿದ್ದೇನೆ. ಕರ್ನಾಟಕಕ್ಕೆ ಅನ್ಯಾಯವಾದರೆ, ಇದನ್ನು ಕಟ್ಟುವಾಗಿ ವಿರೋಧಿಸುವೆ. ಕರ್ನಾಟಕಕ್ಕೆ, ಬೆಳಗಾವಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ನ್ಯಾಯ ದೊರಕಿಸಿ ಕೊಡುವೆ ಎಂದು ಹೇಳಿದ್ದಾರೆ.

ವರ್ಷದ ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷಕ್ಕೆ ಬಂದ ಜಗದೀಶ್ ಶೆಟ್ಟರ್ ಅವರನ್ನು ಚೆನ್ನಾಗಿಯೇ ನೋಡಿಕೊಳ್ಳಲಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಸೋತರೂ ಬಳಿಕ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಆದರೆ, ನಿಷ್ಠೆ ಬದಲಿಸಿದ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಿ ಮೋದಿಯವರನ್ನ ಪ್ರಧಾನಿ ಮಾಡಬೇಕು ಅಂತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಬಿಜೆಪಿಯವರನ್ನು ಬಯ್ಯುವುದು, ಬಿಜೆಪಿಗೆ ಬಂದಾಗ ಕಾಂಗ್ರೆಸ್ ನವರನ್ನು ಬಯ್ಯುವುದು... ಈ ಹಿಂದೆ ಜಿಲ್ಲೆಗೆ ಸಾಕಷ್ಟು ಅನ್ಯಾಯ ಮಾಡಿರುವ ಇಂಥ ಸಮಯ ಸಾಧಕ ರಾಜಕಾರಣಿ ನಮ್ಮ ಜಿಲ್ಲೆಗೆ ಬೇಕಾ? ಎಂದು ಮೃಣಾಲ್‌ ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ.

ಜಿಲ್ಲೆಯ ಅಭಿವೃದ್ಧಿ ಕನಸು ಹೊಂದಿರುವ ನನ್ನನ್ನು ಬೆಂಬಲಿಸಿ, ಜಿಲ್ಲೆಯ ಅಭಿವೃದ್ಧಿಗೆ ಕ್ಷೇತ್ರದ ಮತದಾರರು ಪಕ್ಷಾತೀತವಾಗಿ ಕೈಜೋಡಿಸಬೇಕು. ನಿಮ್ಮ ಮನೆ ಮಗನಾಗಿ ಹಗಲಿರುಳು ದುಡಿಯುವೆ ಎಂದು ಮೃಣಾಲ್‌ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ವರದಿ: ಪ್ರತೀಕ ಚಿಟ್ಟಿಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ