LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪರಿಸರ ಸಂರಕ್ಷಣೆಯಿಂದ ಮಾತ್ರ ಜೀವಸಂಕುಲ ಉಳಿಯಲು ಸಾಧ್ಯ: ಎಂ.ಟಿ.ಕೃಷ್ಣಪ್ಪ

Advertisement
ತುರುವೇಕೆರೆ: ಪ್ರಕೃತಿಯಿಂದಲೇ ಇಂದು ಎಲ್ಲಾ ಜೀವರಾಶಿಗಳು ಉಸಿರಾಡುತ್ತಿವೆ. ಪರಿಸರ ಸಂರಕ್ಷಿಸಿದರೆ ಮಾತ್ರ ಜೀವ ಸಂಕುಲ ಉಳಿಯಲು ಸಾಧ್ಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಪಟ್ಟಣ ಪಂಚಾಯ್ತಿ, ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರು ಹಾಕಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಇಂದು ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮನುಕುಲ, ಜೀವ ಸಂಕುಲಗಳು ಉಳಿದಿರುವುದೇ ಪ್ರಕೃತಿಯಿಂದ, ಅಂತಹ ಪ್ರಕೃತಿ ಇಂದು ಹಾಳಾಗುತ್ತಿದೆ. ಕಾಡು ಉಳಿದರೆ ನಾಡು ಎಂಬ ಸಂದೇಶ ಸಾರ್ವಕಾಲಿಕ ಸತ್ಯವಾದುದು. ಪ್ರಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕರದ್ದಾಗಿದೆ. ಪರಿಸರ ಸಂರಕ್ಷಿಸುವ ಕೆಲಸ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ ಪ್ರತಿನಿತ್ಯ ಪರಿಸರ ಉಳಿಸುವ ಹೊಣೆಗಾರಿಕೆಯನ್ನು ನಿರ್ವಹಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಸ್ವಪ್ನನಟೇಶ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಲಿಂಗರಾಜು, ಒಕ್ಕಲಿಗ ಸಮಾಜದ ನಿರ್ದೇಶಕ ಕಾಂತರಾಜು, ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಪಪಂ ಅಧಿಕಾರಿಗಳಾದ ಪ್ರಶಾಂತ್ ಭದ್ರಣ್ಣನವರ್, ಸದಾನಂದ್, ರಂಗನಾಥ್, ಶಿಕ್ಷಣ ಇಲಾಖೆಯ ಸುರೇಶ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ವಸಂತಕುಮಾರ್, ಮುಖ್ಯಶಿಕ್ಷಕ ಸತೀಶ್, ಮುಖಂಡ ಯೋಗೀಶ್, ಉಪವಲಯ ಅರಣ್ಯಾಧಿಕಾರಿ ತಿಪ್ಪೇಶ್, ಅರಣ್ಯಪಾಲಕ ಗಂಗಾಧರ್ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ