Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾನ್ಮಾರ್ ಭೂಕಂಪ: 700 ದಾಟಿದ ಸಾವಿನ ಸಂಖ್ಯೆ

Advertisement
ನೈಪಿಡಾವ್ (ಮ್ಯಾನ್ಮಾರ್): ಶುಕ್ರವಾರ ಸಂಭವಿಸಿದ ಭೂಕಂಪನದಿಂದಾಗಿ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ತತ್ತರಿಸಿದೆ. ಭೂಕಂಪನದಿಮದಾಗಿ ಮ್ಯಾನ್ಮಾರ್​​ನಲ್ಲಿ ಈವರೆಗೆ ಮೃತರ ಸಂಖ್ಯೆ 700 ದಾಟಿದೆ. ಇನ್ನು 1600ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಶುಕ್ರವಾರ ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಹೊರಗಡೆ ಓಡಿ ಬಂದಿದ್ದರು. ಬಳಿಕ ಆಶ್ರಯ ಪಡೆಯಲು ಪರದಾಡಿದರು. ಮ್ಯಾನ್ಮಾರ್‌ನ ಸರ್ಕಾರವು ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಭೂಕಂಪನದಿಂದ ಹಲವು ಕಟ್ಟಡಗಳು ನೆಲಸಮವಾಗಿವೆ. ಕೆಲವೆಡೆ ರಸ್ತೆಗಳು ಬಿರುಕುಬಿಟ್ಟ ಪರಿಣಾಮ ರಸ್ತೆ ಸಂಚಾರ ಮತ್ತು ಸಂಪರ್ಕ ಸ್ಥಗಿತಗೊಂಡಿದೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ.

ಶುಕ್ರವಾರ ಮಧ್ಯಾಹ್ನ 12.50ಕ್ಕೆ (ಸ್ಥಳೀಯ ಸಮಯ) ಮ್ಯಾನ್ಮಾರ್​ನಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿತ್ತು. ಬಳಿಕ 6.8 ತೀವ್ರತೆಯಲ್ಲಿ ಮತ್ತೊಮ್ಮೆ ಭೂಮಿ ನಡುಗಿರುವುದರಿಂದ ಭಾರೀ ಹಾನಿಯುಂಟಾಗಿದೆ. ಭೂಕಂಪದ ಕೇಂದ್ರಬಿಂದುವು ಸಗೈಂಗ್ ನಗರದ ವಾಯುವ್ಯಕ್ಕೆ 16 ಕಿ.ಮೀ ದೂರದಲ್ಲಿ ಮತ್ತು 10 ಕಿ.ಮೀ ಆಳದಲ್ಲಿತ್ತು ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಭಾರತದಿಂದ ಆಪರೇಷನ್​ : ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಮ್ಯಾನ್ಮಾರ್​ಗೆ ಭಾರತ ಆಪರೇಷನ್​ ಬ್ರಹ್ಮ ಹೆಸರಿನಲ್ಲಿ ನೆರವಿನ ಹಸ್ತ ಚಾಚಿದೆ. ಸಂತ್ರಸ್ತರಿಗಾಗಿ ಕಂಬಳಿಗಳು, ಬ್ಲಾಂಕೆಂಟ್ಸ್, ನೆಲಹಾಸಿಗೆ, ಆಹಾರದ ಪೊಟ್ಟಣಗಳು, ವೈದ್ಯಕೀಯ ಕಿಟ್, ಜನರೇಟ್​ಗಳು ಸೇರಿದಂತೆ 15 ಟನ್​ನಷ್ಟು ಪರಿಹಾರ ಸಾಮಗ್ರಿಗಳನ್ನು ಮ್ಯಾನ್ಮಾರ್​ಗೆ ಭಾರತ ಮೊದಲ ಹಂತದಲ್ಲಿ ಕಳುಹಿಸಿದೆ. ಈಗಾಗಲೇ ಪರಿಹಾರ ಸಾಮಗ್ರಿಗಳು ಯಂಗಾನ್ ತಲುಪಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಬಹುಮಹಡಿ ಕಟ್ಟಡಗಳು ನೆಲಸಮ: ಭೂಕಂಪನದ ತೀವ್ರತೆಗೆ ಬಹುಮಹಡಿ ಕಟ್ಟಡಗಳು ನೆಲಸಮವಾಗಿವೆ. ಜೊತೆಗೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ