Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಳಿ ತಪ್ಪಿದ ಮೈಸೂರು - ದರ್ಭಾಂಗಾ ಎಕ್ಸ್‌ಪ್ರೆಸ್‌

Advertisement
ಚೆನ್ನೈ : ತಮಿಳುನಾಡಿನ ತಿರುವಳ್ಳೂರಿನಲ್ಲಿ ಸರಕು ರೈಲಿಗೆ ರೈಲು ಡಿಕ್ಕಿ ಹೊಡೆದ ನಂತರ ದರ್ಭಾಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

12578 ಮೈಸೂರು-ದರ್ಭಾಂಗ್ ಎಕ್ಸ್‌ ಪ್ರೆಸ್ ರಾತ್ರಿ 8:50 ಕ್ಕೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.ರೈಲು ನಿಂತಿದ್ದ ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಲಭ್ಯ ಮಾಹಿತಿ ಪ್ರಕಾರ ಅದೇ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ.

ಅಶ್ವಿನಿ ವೈಷ್ಣವ್ ಪರಿಸ್ಥಿತಿ ಪರಿಶೀಲನೆ

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಮಾಹಿತಿ ಪಡೆದರು ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದರು. ಅವರು ರೈಲ್ವೆ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಗಮ್ಯಸ್ಥಾನವನ್ನು ತಲುಪುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಗಾಯಗೊಂಡಿರುವ ಪ್ರಯಾಣಿಕರಿಗೆ ಆದಷ್ಟು ಬೇಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡುವಂತೆ ತಿಳಿಸಿದರು. ಆದಷ್ಟು ಬೇಗ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಳಿತಪ್ಪಿದ 13 ಬೋಗಿಗಳು

ಇತ್ತೀಚಿನ ವರದಿಗಳ ಪ್ರಕಾರ ಸುಮಾರು 13 ಬೋಗಿಗಳು ಹಳಿತಪ್ಪಿವೆ. ದರ್ಬಂಗಾ ಎಕ್ಸ್‌ಪ್ರೆಸ್ ಲೂಪ್ ಲೈನ್‌ಗೆ ಪ್ರವೇಶಿಸಿ ನಿಂತ ರೈಲಿಗೆ ಡಿಕ್ಕಿ ಹೊಡೆದಿದೆ. ಹಳಿಯಲ್ಲಿ ಸ್ವಲ್ಪ ಜರ್ಕ್ ಆಗಿದ್ದು, ರೈಲು ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚೆನ್ನೈ ಸೆಂಟ್ರಲ್‌ನಿಂದ ವೈದ್ಯಕೀಯ ಪರಿಹಾರ ವ್ಯಾನ್ ಮತ್ತು ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್‌ ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಸಿಬ್ಬಂದಿ ಮತ್ತು ಚಾಲಕ ಸೇರಿದಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪಾರ್ಸೆಲ್ ವ್ಯಾನ್‌ನಲ್ಲಿ ಮಾತ್ರ ಬೆಂಕಿ ಕಾಣಿಸಿಕೊಂಡಿದೆ ಮತ್ತು ಘಟನೆಯಿಂದಾಗಿ ಒಟ್ಟು 13ಬೋಗಿಗಳು ಹಳಿತಪ್ಪಿವೆ. ಅಪಘಾತದ ವರದಿಯಾದ ಕೂಡಲೇ ಸುಮಾರು 400 ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸುವಲ್ಲಿ ಸಹಾಯ ಮಾಡಿದರು.

ಮಾರ್ಗ ಬದಲಿಸಿದ ರೈಲುಗಳ ಪಟ್ಟಿ:

ಅಪಘಾತದ ಕಾರಣ, ಮೂರು ರೈಲುಗಳು ಚೆನ್ನೈ ಗುಡೂರ್ ಪ್ರದೇಶದಲ್ಲಿ ಸಿಲುಕಿಕೊಂಡಿವೆ, ಅವುಗಳನ್ನು ಬೇರೆ ಮಾರ್ಗಗಳಲ್ಲಿ ತಿರುಗಿಸಲು ಯೋಜಿಸಲಾಗಿದೆ:

ತಿರುಚಿರಾಪಳ್ಳಿ ಹೌರಾ ಎಕ್ಸ್‌ ಪ್ರೆಸ್

ಎರ್ನಾಕುಲಂ ಟಾಟಾನಗರ ಎಕ್ಸ್‌ ಪ್ರೆಸ್

ಕಾಕಿನಾಡ ಧನಬಾದ್ ವಿಶೇಷ ಎಕ್ಸ್‌ ಪ್ರೆಸ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ