Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ರಾಜವಂಶಸ್ಥರ ಆಸ್ತಿ ವಿವಾದ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ 

Advertisement
ನವದೆಹಲಿ: ಕರ್ನಾಟಕ ಸರ್ಕಾರ ಮತ್ತು ಮೈಸೂರು ರಾಜವಂಶಸ್ಥರ ನಡುವೆ ಶುರುವಾಗಿರುವ ಆಸ್ತಿ ಗುದ್ದಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ.

ಅರಮನೆ ಜಾಗಕ್ಕೆ ಟಿಡಿಆರ್‌ ಪಾವತಿಸುವ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನಕ್ಕೆ ಸೋಲುಂಟಾಗಿದ್ದು, ಸುಪ್ರೀಂಕೋರ್ಟ್ ಇದೀಗ ಮೈಸೂರು ರಾಜವಂಶಸ್ಥರಿಗೆ ಖುಷಿ ಕೊಡುವ ತೀರ್ಪು ನೀಡಿದೆ.

ಕರ್ನಾಟಕ ಸರ್ಕಾರ ರಸ್ತೆ ನಿರ್ಮಾಣ ಉದ್ದೇಶಕ್ಕೆ ಬಳಸಲು ಉದ್ದೇಶಿಸಿದ್ದ ಮೈಸೂರು ರಾಜರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ, ಟಿಡಿಆರ್‌ ಪಾವತಿಸುವಂತೆ ಕೋರ್ಟ್‌ ಸೂಚಿಸಿದೆ. ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರು ಪರಿಶೀಲನೆಗೆ ಆಸ್ಪದವೇ ಇಲ್ಲ ಎನ್ನುವ ವಿಚಾರವನ್ನು ಸುಪ್ರೀಂಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ತಿಳಿಸಿದೆ.

ನಾವು ಈಗಾಗಲೇ ಈ ಬಗ್ಗೆ ಆದೇಶ ಹೊರಡಿಸಿದ್ದೇವೆ. ಇದನ್ನು ಅಧಿಕಾರಿಗಳು ಪಾಲಿಸಲೇಬೇಕಾಗಿದೆ, ಇಲ್ಲದೇ ಹೋದಲ್ಲಿ ಅವರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಸುಪ್ರೀಂಕೋರ್ಟ್‌ ಎಚ್ಚರಿಕೆ ಕೂಡ ಕೊಟ್ಟಿದೆ.

ಸರ್ಕಾರದ ಪರ ಕಪಿಲ್‌ ಸಿಬಲ್‌ ವಾದ

ಸುಪ್ರೀಂಕೋರ್ಟ್‌ನಲ್ಲಿ ನ್ಯಾ.ಎಂ.ಎಂ.ಸುಂದರೇಶ್‌ ಮತ್ತು ನ್ಯಾ.ಅರವಿಂದ್‌ ಕುಮಾರ್‌ ಅವರ ನ್ಯಾಯಪೀಠದ ಮುಂದೆ ಕರ್ನಾಟಕ ಸರ್ಕಾರ ವಾದ ಮಂಡಿಸಿತ್ತು. ಕರ್ನಾಟಕ ಸರ್ಕಾರದ ಪರ ವಕೀಲರಾದ ಕಪಿಲ್‌ ಸಿಬಲ್‌ ಮತ್ತು ಅಡ್ವೋಕೇಟ್‌ ಜನರಲ್‌ ಶಶಿಕಿರಣ್ ಶೆಟ್ಟಿ ಪ್ರಕರಣದ ಬಗ್ಗೆ ವಾದ ಮಂಡಿಸಿದ್ದರು.

ವಿವಾದಲ್ಲಿರುವ ಜಾಗ ಬಳಸದೆ ಇರಲು ಸರ್ಕಾರ ನಿರ್ಧರಿಸಿದೆ. ಭೂಮಿ ವಶಪಡಿಸಿಕೊಳ್ಳುವ ನಿರ್ಧಾರದಿಂದಲೂ ಹಿಂದೆ ಸರಿದಿದ್ದೇವೆ. ನಾವು ಇತ್ತೀಚೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಜಾರಿಯಲ್ಲಿ ಇರುವವರೆಗೆ, ಇಲ್ಲವೇ ಅದನ್ನು ರದ್ದು ಮಾಡುವವರೆಗೂ ನಾವು ಭೂಮಿ ಬಳಸಿಕೊಳ್ಳಲು ಹೋಗಲ್ಲ ಎಂದು ತಿಳಿಸಿದ್ದರು.

ಆದೇಶ ಪಾಲಿಸುವಂತೆ ಸುಪ್ರೀಂ ಸೂಚನೆ

ಮೈಸೂರು ಅರಮನೆ ಪರ ವಕೀಲರು ಕರ್ನಾಟಕ ಸರ್ಕಾರದ ವಾದಕ್ಕೆ ತಿರುಗೇಟು ನೀಡಿದ್ದು, ಮಾನ್ಯ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.

ಸುಪ್ರೀಂಕೋರ್ಟ್‌ನ ಹಿಂದಿನ ಆದೇಶ ಪಾಲಿಸಲು 6 ವಾರ ಸಮಯ ನೀಡಿದ ಅವಧಿಯಲ್ಲೇ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ವಾದಿಸುವ ಮೂಲಕ, ಮಾಹಿತಿ ನೀಡಿದ್ದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಪೀಠ, ಟಿಡಿಆರ್‌ ಹಸ್ತಾಂತರ ಕುರಿತ ನಮ್ಮ ಹಿಂದಿನ ಆದೇಶ ಮರುಪರಿಶೀಲನೆ ಅಸಾಧ್ಯ ಎಂದು ಹೇಳಿದೆ. ಹೀಗೆ ಅದನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಖಡಕ್ ಸೂಚನೆ ನೀಡಿ ಅರ್ಜಿ ವಿಚಾರಣೆಯನ್ನ ಇದೀಗ ಮುಂದೂಡಿಕೆ ಮಾಡಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ